ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ತೆಪ್ಪ ಮುಳುಗಿ ಭದ್ರಾನದಿ ಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಭದ್ರಾ ಹಿನ್ನೀರಿನಲ್ಲಿ ಸಂಭವಿಸಿದೆ.
ಶಿವಮೊಗ್ಗದ ವಿದ್ಯಾನಗರ ನಿವಾಸಿಗಳಾದ ಅದೀಲ್, ಸಾಜೀದ್, ಅಪ್ದಾಖಾನ್ ಮೃತಪಟ್ಟವರು.
ಎನ್ಆರ್ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ಪ್ರಯಾಣಿಸುತ್ತಿದ್ದಾಗ ತೆಪ್ಪ ಮುಳುಗಿತ್ತು. ನದಿ ಪಾಲಾದ ಮೂವರ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಹೊರತೆಗೆದಿದ್ದಾರೆ.
ಮೃತದೇಹವನ್ನು ಎನ್ಆರ್ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನೆ ಮಾಡಲಾಗಿದೆ. ಮಂಗಳವಾರ ಈ ಘಟನೆ ನಡೆದಿದ್ದು, ಶವಕ್ಕಾಗಿ ಶೋಧ ಕಾರ್ಯ ನಡೆದಿದ್ದರೂ ಪತ್ತೆಯಾಗಿರಲಿಲ್ಲ. ಬುಧವಾರ ಬೆಳಿಗ್ಗೆ ಶವಗಳನ್ನು ಪತ್ತೆ ಹಚ್ಚುವಲ್ಲಿ ಸಿಬ್ಬಂದಿ ಯಶಸ್ವಿಯಾದರು.