ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸೋದರಿ ಪ್ರಿಯಾಂಕಾ ಗಾಂಧಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡು ಭೇಟಿ ರದ್ದುಗೊಳಿಸಲಾಗಿದೆ.
ಲೋಕಸಭಾ ಅಧಿವೇಶನ ಹಿನ್ನೆಲೆಯಲ್ಲಿ ಮಂಗಳವಾರ ವಯನಾಡುಗೆ ಭೇಟಿ ನೀಡಲು ಸಾಧ್ಯವಾಗದೇ ಇದ್ದರೂ ಬುಧವಾರ ಬೆಳಿಗ್ಗೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ರಾಹುಲ್ ಮತ್ತು ಪ್ರಿಯಾಂಕಾ ವಯನಾಡಿಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಬೇಕಿತ್ತು.
ಆದರೆ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಹೆಲಿಕಾಫ್ಟರ್ ಇಳಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕೊನೆಯ ಗಳಿಗೆಯಲ್ಲಿ ವಯನಾಡು ಭೇಟಿಯನ್ನು ರದ್ದುಗೊಳಿಸಲಾಗಿದೆ.
ವಯನಾಡು ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸತತ ಎರಡನೇ ಬಾರಿ ಆಯ್ಕೆಯಾಗಿದ್ದು, ಈ ಬಾರಿ ಅಮೇಥಿಯಲ್ಲೂ ಗೆಲುವು ಸಾಧಿಸಿದ್ದರಿಂದ ಸೋದರಿ ಪ್ರಿಯಾಂಕಾಗೆ ವಯನಾಡು ಕ್ಷೇತ್ರ ಬಿಟ್ಟುಕೊಡಲು ನಿರ್ಧರಿಸಿದ್ದರು.