ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಮಂಗಳವಾರ ಸಂವಿಧಾನ ಹಿಡಿದು ಲೋಕಸಭೆ ಅಧಿವೇಶನದಲ್ಲಿ ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಪ್ರತಿಪಕ್ಷಗಳ ಸಭೆಯ ನಂತರ ಕಾಂಗ್ರೆಸ್ ನಾಯಕ ವಿ. ವೇಣುಗೋಪಾಲ್ ರಾಹುಲ್ ಗಾಂಧಿ ಅವರನ್ನು ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿರುವ ವಿಷಯವನ್ನು ಪ್ರಕಟಿಸಿದರು.
ರಾಹುಲ್ ಗಾಂಧಿ ಅವರ ಆಯ್ಕೆ ಕುರಿತು ಹಂಗಾಮಿ ಸ್ಪೀಕರ್ ಭಾತೃಹರಿ ಮಹತಬ್ ಅವರಿಗೆ ಮಾಹಿತಿ ನೀಡಲಾಗಿದೆ.
ದೇಶಾದ್ಯಂತ ಪಾದಯಾತ್ರೆ ನಡೆಸಿ ಕಾಂಗ್ರೆಸ್ ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ತೋರಲು ಪ್ರಮುಖ ಕಾರರಾಗಿದ್ದ ರಾಹುಲ್ ಗಾಂಧಿ ನೇತೃತ್ವದಲ್ಲಿ ಲೋಕಸಭೆಯನ್ನು ಎದುರಿಸಲು ಪ್ರತಿಪಕ್ಷಗಳು ಸಜ್ಜಾಗಿವೆ.
ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 99 ಸ್ಥಾನದಲ್ಲಿ ಗೆಲುವು ಪಡೆದಿದ್ದರೆ, ಕಳೆದೆರಡು ಚುನಾವಣೆಯಲ್ಲಿ ಬಹುಮತ ಪಡೆದಿದ್ದ ಬಿಜೆಪಿ ಮೋದಿ ನೇತೃತ್ವದಲ್ಲಿ ಮೊದಲ ಬಾರಿ ಬಹುಮತ ಪಡೆಯಲು ವಿಫಲವಾಗಿದೆ.