ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡು ಕ್ಷೇತ್ರವನ್ನು ಸೋದರಿ ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕ ಗಾಂಧಿ ಅಧಿಕೃತವಾಗಿ ಸಕ್ರಿಯ ರಾಜಕಾರಣಕ್ಕೆ ಧುಮುಕ್ಕಿದ್ದಾರೆ.
ರಾಹುಲ್ ಗಾಂಧಿ ಬಿಟ್ಟುಕೊಟ್ಟ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಅಧಿಕೃತ ಘೋಷಣೆ ಮಾಡಿದರು. ಈ ಮೂಲಕ ಪ್ರಿಯಾಂಕ ಅಧಿಕೃತವಾಗಿ ಸಕ್ರಿಯ ರಾಜಕಾರಣಕ್ಕೆ ಕೊನೆಗೂ ಪ್ರವೇಶಿಸಿದ್ದಾರೆ.
ಪಕ್ಷದ ಸಭೆಯಲ್ಲಿ ಗಾಂಧಿ ಕುಟುಂಬಕ್ಕೆ ಹಾಗೂ ರಾಹುಲ್ ಗಾಂಧಿಗೆ ಹತ್ತಿರವಾದ ಕ್ಷೇತ್ರವಾದ ರಾಯಲ್ ಬರೇಲಿಯನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೇವೆ. ಇದರಿಂದ ಪಕ್ಷಕ್ಕೂ ಒಳ್ಳೆಯದಾಗಲಿದೆ ಎಂಬ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗಿದೆ ಎಂದು ಖರ್ಗೆ ತಿಳಿಸಿದರು.
ವಯನಾಡು ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂದು ವಯನಾಡು ಕ್ಷೇತ್ರದ ಜನರು ಒತ್ತಡ ಹಾಕಿದ್ದಾರೆ. ಆದರೆ ಎರಡು ಕ್ಷೇತ್ರವನ್ನು ಉಳಿಸಿಕೊಳ್ಳುವುದು ಕಾನೂನಿನಲ್ಲಿ ಅವಕಾಶವಿಲ್ಲ. ಪ್ರಿಯಾಂಕಾ ಗಾಂಧಿಗೆ ವಯನಾಡು ಬಿಟ್ಟುಕೊಡಲು ನಿರ್ಧರಿಸಲಾಯಿತು. ಇದರಿಂದ ವಯನಾಡು ಕುಟುಂಬದ ಸದಸ್ಯರ ಬಳಿಯೇ ಇದ್ದಂತೆ ಆಗುತ್ತದೆ ಎಂದು ಅವರು ವಿವರಿಸಿದರು.