ದೇಶಾದ್ಯಂತ ಆಚರಿಸಲಿರುವ ದೀಪಾವಳಿ ಹಾಗೂ ಛತ್ ಪೂಜಾ ಪ್ರಯುಕ್ತ ರೈಲ್ವೆ ಇಲಾಖೆ 7000 ವಿಶೇಷ ರೈಲುಗಳ ಸೇವೆಯನ್ನು ಘೋಷಿಸಿದೆ.
ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುವ ಹಿನ್ನೆಲೆಯಲ್ಲಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ 7000 ವಿಶೇಷ ರೈಲುಗಳನ್ನು ಬಿಡಲಾಗುವುದು ಎಂದು ಗುರುವಾ ಸುದ್ದಿಗೋಷ್ಠಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಭವ್ ತಿಳಿಸಿದ್ದಾರೆ.
ಕಳೆದ ವರ್ಷ ರೈಲ್ವೆ ಇಲಾಖೆ 4500 ವಿಶೇಷ ರೈಲುಗಳನ್ನು ಬಿಟ್ಟಿತ್ತು. ಈ ಬಾರಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ 1500 ಹೆಚ್ಚು ರೈಲುಗಳನ್ನು ಈ ಬಾರಿ ಬಿಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ವಿಶೇಷ ರೈಲುಗಳ ಜೊತೆಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುವುದು. ಈ ಮೂಲಕ ಹೆಚ್ಚು ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಉತ್ತರ ಭಾರತದಲ್ಲಿ ಶೇ.181ರಷ್ಟು ಪ್ರಯಾಣಿಕರು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.