Thursday, May 14, 2026
Google search engine
Homeಬೆಂಗಳೂರುಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಮಧ್ಯಾಹ್ನದ ನಂತರ ಜ್ಞಾನಭಾರತಿ, ವಿಜಯನಗರ, ಕೆಂಗೇರಿ ಮುಂತಾದ ಕಡೆಗಳಲ್ಲಿ ಮಳೆಯಾಗಿದೆ.

ಬೆಂಗಳೂರಿನ ಪ್ರಮುಖ ಪ್ರದೇಶಗಳಾದ ವಿಧಾನಸೌಧ, ಶಿವಾಜಿ ನಗರ, ಹೆಚ್ಎಸ್ ಆರ್ ಲೇಔಟ್, ಕೆಆರ್ ಮಾರುಕಟ್ಟೆ, ಚಾಮರಾಜಪೇಟೆ, ಬಸವನಗುಡಿ, ಜಯನಗರ, ಒಆರ್ ಆರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು, ಹಾಗೂ ಬಯಲು ಸೀಮೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಉಡುಪಿಗೆ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏಪ್ರಿಲ್ 3, 2025 ರಂದು ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಂದು ನಗರಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ತಾಪಮಾನವು 3 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ.

ಬಿರುಗಾಳಿಯಿಂದ ಕೂಡಿದ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಬೀಸುವ ಸಾಧ್ಯತೆಯೂ ಇದೆ. ನಗರದಲ್ಲಿ ಕನಿಷ್ಠ ತಾಪಮಾನವು ಬೆಳಿಗ್ಗೆ 20 ಡಿಗ್ರಿ ಸೆಲ್ಸಿಯಸ್ ಮತ್ತು ಮಧ್ಯಾಹ್ನ 33 ಡಿಗ್ರಿ ಸೆಲ್ಸಿಯಸ್ ಇರಬಹುದು. ವಾತಾವರಣದಲ್ಲಿ ತೇವಾಂಶವು ಸುಮಾರು 54 ಪ್ರತಿಶತದಷ್ಟು ಇರಲಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಬದಲಾಗಬಹುದು. ಇದರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಮಿಂಚು ಮತ್ತು ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments