Thursday, June 25, 2026
Google search engine
Homeರಾಜ್ಯಪೊಲೀಸ್ ಕಚೇರಿಯಲ್ಲೇ ರನ್ಯಾ ರಾವ್ ತಂದೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ: ವರದಿಗೆ ಸಿಎಂ ಸೂಚನೆ!

ಪೊಲೀಸ್ ಕಚೇರಿಯಲ್ಲೇ ರನ್ಯಾ ರಾವ್ ತಂದೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ: ವರದಿಗೆ ಸಿಎಂ ಸೂಚನೆ!

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ತಂದೆ ಹಾಗೂ ಕರ್ನಾಟಕದ ಐಜಿಪಿ (ಡಿಜಿಪಿ ಶ್ರೇಣಿ) ರಾಮಚಂದ್ರ ರಾವ್ ಪೊಲೀಸ್ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯರ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೊಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಕುರಿತು ಸಮಗ್ರ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚಿಸಿದ್ದಾರೆ.

ಡಿಜಿಪಿ ಶ್ರೇಣಿಯ ಅಧಿಕಾರಿಯಾಗಿರುವ ರಾಮಚಂದ್ರರಾವ್ ಹಲವು ಮಹಿಳೆಯರ ಜೊತೆ ಅಸಭ್ಯ ರೀತಿಯಲ್ಲಿ ಇರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್ ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸ್ ಸಮವಸ್ತ್ರಕ್ಕೆ ಇರುವ ಉನ್ನತ ಘನತೆ ಮರೆತು ಕಚೇರಿಯಲ್ಲೇ ಅಶ್ಲೀಲವಾಗಿ ನಡೆದುಕೊಂಡಿರುವ ರಾಮಚಂದ್ರರಾವ್ ವಿರುದ್ಧ ಈ ರೀತಿಯ ಆರೋಪ ಇದೇ ಮೊದಲೇನಲ್ಲ. ಕಳೆದ ವರ್ಷವೂ ಇದೇ ರೀತಿಯು ಆರೋಪಗಳು ಕೇಳಿ ಬಂದಿದ್ದವು.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ.

ವೈರಲ್ ಆಗಿರುವ ವೀಡಿಯೊಗಳಲ್ಲಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲೇ ಕುಳಿತು ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಪುತ್ರಿ ರನ್ಯಾ ರಾವ್ ಪ್ರಕರಣದಲ್ಲೂ ಕೈವಾಡವಿದೆ ಎಂಬ ಆರೋಪ ಎದುರಿಸಿದ್ದ ರಾಮಚಂದ್ರರಾವ್ ಅಮಾನತು ಶಿಕ್ಷೆಗೆ ಒಳಗಾಗಿದ್ದರು. ಇದಾದ ನಂತರ ಮತ್ತೆ ಹಳೇ ಚಾಳಿ ಮುಂದುವರಿಸಿರುವುದು ಆಘಾತಕಾರಿ ಬೆಳವಣಿಗೆ ಆಗಿದೆ.

ಮಾಡೆಲ್ ಜೊತೆ ಸರಸವಾಡುವಾಗ ವೀಡಿಯೊ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ವಿವಸ್ತ್ರರಾಗಿ ವಿಕೃತಿ ಮೆರೆದಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಅಶ್ಲೀಲವಾಗಿ ನಡೆದುಕೊಳ್ಳುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಡಿಜಿಪಿ ನಡೆಯನ್ನು ಟೀಕಿಸಿರುವ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಅಧಿಕಾರಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಅಮಾನತು ಮಾಡಬೇಕು ಎಂಬ ಒತ್ತಾಯಿಸಿವೆ.

ಎಐ ವೀಡಿಯೋ ಮೂಲಕ ಷಡ್ಯಂತ್ರ

ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೋ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಷಡ್ಯಂತ್ರ ರೂಪಿಸಿವೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಮಾಧ್ಯಮಗಳ ಪ್ರಶ್ನೆಗೆ ಕಕ್ಕಾಬಿಕ್ಕಿ

ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸುವರ್ಣ ನ್ಯೂಸ್ ಪ್ರತಿನಿಧಿಗಳು ರಾಮಚಂದ್ರ ರಾವ್ ಅವರನ್ನು ಪ್ರಶ್ನಿಸಿದಾಗ, ಅವರು ಸರಿಯಾದ ಉತ್ತರ ನೀಡಲಾಗದೆ ತಬ್ಬಿಬ್ಬಾದ ಪ್ರಸಂಗವೂ ನಡೆಯಿತು. ವಿಡಿಯೋದಲ್ಲಿರುವುದು ನೀವೇ ಅಲ್ಲವೇ? ಸಮವಸ್ತ್ರದಲ್ಲೇ ಇಂತಹ ವರ್ತನೆ ಸರಿಯೇ? ಎಂಬ ನೇರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅವರು ಕಕ್ಕಾಬಿಕ್ಕಿಯಾಗಿ ಅಲ್ಲಿಂದ ನಿರ್ಗಮಿಸಿದರು. ಅವರ ಈ ವರ್ತನೆ ಮತ್ತಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments