Thursday, May 14, 2026
Google search engine
Homeರಾಜ್ಯಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತ, ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ

ಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತ, ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ

ಬೆಂಗಳೂರು: ರಾಜ್ಯಾದ್ಯಂತ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಡೆಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಈ ಸಮೀಕ್ಷೆಯನ್ನು ಸೆಪ್ಟೆಂಬರ್ 15 ರಿಂದ ಪ್ರಾರಂಭಿಸಿ, ಕಚೇರಿ ಕೆಲಸದ ದಿನಗಳಲ್ಲಿ ಸಮೀಕ್ಷೆ ನಡೆಸಿ 45 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಡೆಸಿ, ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪುನರ್ವಸತಿ ಕಲ್ಪಿಸಲಾಗುವುದು ಎಂದರು.

ಸಮೀಕ್ಷೆ ಕಾರ್ಯ ಕೈಗೊಳ್ಳಲು ಈಗಾಗಲೇ ಪೂರ್ವ ತಯಾರಿ ಕೈಗೊಂಡಿದ್ದು, ಮೊಬೈಲ್ ಆಪ್ ಮೂಲಕ ಟ್ರಾನ್ಸ್ ಜೆಂಡರ್ನ್ ಸಮೀಕ್ಷೆ ಗೆ “ಏಂಖಒಂಓI Web ಂಠಿಠಿಟiಛಿಚಿಣioಟಿ ಅನ್ನು ಸಿದ್ಧಪಡಿಸಲಾಗಿದೆ. ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಸೇವಾ ಸಿಂಧು ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ವೆಬ್ ಅಪ್ಲಿಕೇಶನ್ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆಗಳನ್ನು ಕೈಗೊಳ್ಳಲಾಗುವುದು.

ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ, ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ರಾಜ್ಯದ ಎಲ್ಲಾ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗುತ್ತದೆ. ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಯನ್ನು 15 ಜಿಲ್ಲೆಗಳ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರ ಮೂಲಕವೇ ಸಮೀಕ್ಷೆ ಕಾರ್ಯ ಕೈಗೊಳ್ಳುತ್ತಿರುವುದು ಸದರಿ ಸಮೀಕ್ಷೆಯ ವಿಶೇಷತೆಯಾಗಿದೆ. ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ಕೈಗೊಳ್ಳಲು ಗುರುತಿಸಲಾಗಿರುವ ಸಮೀಕ್ಷಾದಾರರಿಗೆ ಹಾಗೂ ದೇವದಾಸಿ ಪುನರ್ವಸತಿ ಯೋಜನಾ ಘಟಕದ ಅಧಿಕಾರಿ ಸಿಬ್ಬಂದಿಗಳು ಸದರಿ ಸಮೀಕ್ಷೆಯನ್ನು ಕೈಗೊಳ್ಳುತ್ತಾರೆ. ಸಮೀಕ್ಷೆದಾರರುಗಳಿಗೆ ವಿವಿಧ ಹಂತದ ತರಬೇತಿಯನ್ನು ನೀಡಲಾಗಿದೆ. ಎರಡು ಸಮೀಕ್ಷೆಗಳಲ್ಲಿ ಸಂಬಂಧಪಟ್ಟವರು ಭಾಗವಹಿಸಲು ಹೆಚ್ಚಿನ ಪ್ರಚಾರಕ್ಕಾಗಿ ಮಾಹಿತಿ, ಶಿಕ್ಷಣ ಹಾಗೂ ಸಂವಹನಕ್ಕೆ ಸಂಬಂಧಿಸಿದಂತೆ ಪೋಸ್ಟರ್ ಹಾಗೂ ಹೋಡಿರ್ಂಗ್ ತಯಾರಿಸಿ ರಾಜ್ಯಾದ್ಯಂತ ವಿವಿಧ ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮುಖಾಂತರ ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗುವುದು.

ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷಾ ಕಾರ್ಯನಿರ್ವಹಣೆಗಾಗಿ ಜಿಲ್ಲಾಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಒಳಗೊಂಡ ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳನ್ನು ಒಳಗೊಂಡಂತೆ ಸಮಿತಿ ರಚಿಸಲಾಗಿದೆ.

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷಾ ಕಾರ್ಯನಿರ್ವಹಣೆಗಾಗಿ ವಿವಿಧ ಹಂತಗಳಲ್ಲಿ ಅಂತರಿಕ ಸಮಿತಿ, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸಮಿತಿಗಳನ್ನು ಮಾಜಿ ದೇವದಾಸಿ ಮಹಿಳೆಯರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ರಚಿಸಲಾಗಿದೆ. ಹಿಂದಿನ ಸಮೀಕ್ಷೆಯಲ್ಲಿ ಬಿಟ್ಟು ಹೋಗಿರುವುದಾಗಿ ಮನವಿ ಸಲ್ಲಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರ ಮನವಿಯನ್ನು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿ ಮುಖಾಂತರ ನಿಯಮಾನುಸಾರ ಕ್ರಮ ಕೈಗೊಂಡು ಇತ್ಯರ್ಥಪಡಿಸಲಾಗುವುದು ಎಂದರು.

ಎರಡು ಸಮೀಕ್ಷೆಗಳಿಗೆ ಸಹಾಯವಾಣಿ ಸಂಖ್ಯೆ 1800 599 2025 ಅಥವಾ ಜಿಲ್ಲಾ ವ್ಯವಸ್ಥಾಪಕರು ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪದ್ಮಾವತಿ, ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಇತರೆ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments