Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಮನರಂಜನೆ

ಕನ್ನಡ ಚಿತ್ರರಂಗ ಖ್ಯಾತ ಹಾಸ್ಯ ನಟ, ರಂಗಕರ್ಮಿ ಸರಿಗಮ ವಿಜಿ ಇನ್ನಿಲ್ಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
sarigama viji
sarigama viji

ಕನ್ನಡ ಚಿತ್ರರಂಗದ ಹಿರಿಯ ನಟ, ರಂಗ ಕಲಾವಿದ ಸರಿಗಮ ವಿಜಿ ಬುಧವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉಸಿರು ನಿಲ್ಲಿಸಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸರಿಗಮ ವಿಜಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಕ್ರಾಂತಿ ಮಾರನೇ ದಿನವಾದ ಬುಧವಾರ 9.45ಕ್ಕೆ ಮೃತಪಟ್ಟಿದ್ದಾರೆ.

269ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ, ೮೦ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸರಿಗಮ ವಿಜಿ, ಕನ್ನಡದ ಕಿರುತೆರೆಯಲ್ಲೂ ಸಾಕಷ್ಟು ಧಾರವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಅವರದ್ದೇ ನಿರ್ದೇಶನದ ಸರಿಗಮದಲ್ಲಿ ಸಂಸಾರ ನಾಟಕದ ಜನಪ್ರಿಯತೆಯಿಂದ ಸರಿಗಮ ವಿಜಿ ಎಂದೇ ಖ್ಯಾತರಾಗಿದ್ದು, ಈ ನಾಟಕ ಸಾವಿರಕ್ಕೂ ಅಧಿ ಪ್ರದರ್ಶನ ಕಾಣುವ ಮೂಲಕ ದಾಖಲೆ ಬರೆದಿತ್ತು.

ಸರಿಗಮ ವಿಜಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ಮನೆಯಲ್ಲಿ ನಾಳೆ ಬೆಳಿಗ್ಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯೊಳಗೆ ಚಾಮರಾಜಪೇಟೆಯ ಟಿಆರ್ ಮಿಲ್ ಬಳಿಯ ಚಿತಾಗಾರಾದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳುವಲದ ಮಡಿಲಲ್ಲಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಸರಿಗಮ ವಿಜಿ ಡಕೋಟಾ ಪಿಕ್ಚರ್ ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment