ಚೆನ್ನೈ: ಬಹುಭಾಷಾ ಖ್ಯಾತ ಸಿನಿಮಾ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕನ್ನಡದ ‘ಹಾಲು ಜೇನು’, ‘ದೇವತಾ ಮನುಷ್ಯ’, ಮೂಕಿ ಸಿನಿಮಾ ‘ಪುಷ್ಪಕ ವಿಮಾನ’ ಶಿವರಾಜ್ ಕುಮಾರ್ ಪಾದರ್ಪಣೆ ಮಾಡಿದ ಆನಂದ್ ಚಿತ್ರ ಸೇರಿ 60ಕ್ಕೂ ಅಧಿಕ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
94ನೇ ವಯಸ್ಸಿನಲ್ಲೂ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದಿದ್ದರು. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಸಿಂಗೀತಂ ಶ್ರೀನಿವಾಸ ರಾವ್ ಹಣ ವಾಪಸ್ ನಿರ್ದೇಶಕ ಎಂದೇ ಖ್ಯಾತಿ ಪಡೆದಿದ್ದರು. ಇವರ ಚಿತ್ರಗಳು ಹಾಕಿದ ಬಂಡವಾಳಕ್ಕೆ ಮೋಸ ಮಾಡುತ್ತಿರಲಿಲ್ಲ. ಅಲ್ಲದೇ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.
1931ರ ಸೆಪ್ಟೆಂಬರ್ 21 ರಂದು ಜನಿಸಿದ ಸಿಂಗೀತಂ ಶ್ರೀನಿವಾಸ ರಾವ್ ನಿರ್ದೇಶಕರಾಗಿ ಮಾತ್ರವಲ್ಲದೆ ಬರಹಗಾರ, ನಿರ್ಮಾಪಕ ಮತ್ತು ಸಂಗೀತ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದಾರೆ. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಇತರ ಭಾಷೆಗಳಲ್ಲಿ ಕಮಲ್ ಹಾಸನ್ ಸೇರಿದಂತೆ ಹಲವು ಖ್ಯಾತ ನಟ-ನಟಿಯರ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.



