ನವದೆಹಲಿ: ಎಸ್ಐಆರ್ ಅಕ್ರಮ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಮೈತ್ರಿಕೂಟಗಳು ಒಗ್ಗಟ್ಟಿನಿಂದ ನಡೆಸುತ್ತಿರುವ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ವಿಪಕ್ಷಗಳು ಮಂಗಳವಾರ ದೆಹಲಿಯಲ್ಲಿ ಚಹಾಕೂಟ ನಡೆಸಿದರು.
ಚಹಾಕೂಟದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನಾನು ಕರೆದ ಚಹಾಕೂಟದಲ್ಲಿ ಎಲ್ಲಾ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಎಲ್ಲರೂ ಒಂದೇ ಕಡೆ ನಿಂತಿದ್ದೇವೆ. ಎಂದರು.
ಎಸ್ ಐಆರ್ ಪ್ರಕ್ರಿಯೆ ರದ್ದುಗೊಳಿಸಬೇಕು ಹಾಗೂ ಕೇಂದ್ರ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಗೆ ವ್ಯಾಪಕ ಬೆಂಬಲ ದೊರೆಯುತ್ತಿದೆ ಎಂದರು.
ಇಂಡಿಯಾ ಬ್ಲಾಕ್ ನೇತೃತ್ವದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಪ್ರತಿಭಟನೆಯನ್ನು ಮುಂದುವರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಚಹಾಕೂಟದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಶಿವಸೇನೆಯ ನಾಯಕ ಸಂಜಯ್ ರಾವತ್, ಟಿಎಂಸಿಯ ಸಾಗರಿಕಾ ಘೋಷ್, ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ ನಾಯಕಿ ನೇಹಾ ಬೋರಾ ಮುಂತಾದವರು ಪಾಲ್ಗೊಂಡಿದ್ದರು.



