ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ದಿಗ್ಗಜ ರಿಕಿ ಪಾಂಟಿಂಗ್ 2025ನೇ ಸಾಲಿನ ಐಪಿಎಲ್ ಟಿ-20 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡಿದ್ದ ರಿಕಿ ಪಾಂಟಿಂಗ್ ಅವರನ್ನು ಮೂರು ತಿಂಗಳ ನಂತರ ಪಂಜಾಬ್ ಕಿಂಗ್ಸ್ ಬರ ಮಾಡಿಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖ್ಯ ಕೋಚ್ ಆಗಿ ಸತತ 7 ವರ್ಷ ಕಾರ್ಯ ನಿರ್ವಹಿಸಿದ್ದ ರಿಕಿ ಪಾಂಟಿಂಗ್ ಅವರನ್ನು ಇದುವರೆಗೆ ಒಂದು ಬಾರಿಯೂ ತಂಡ ಟ್ರೋಫಿ ಗೆಲ್ಲದ ಹಿನ್ನೆಲೆಯಲ್ಲಿ ವಜಾ ಮಾಡಿತ್ತು.
ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿಕೊಂಡಿರುವುದಕ್ಕೆ ರಿಕಿ ಪಾಂಟಿಂಗ್ ಸಂತಸ ವ್ಯಕ್ತಪಡಿಸಿದ್ದು, ಮುಂದಿನ ಟೂರ್ನಿಯನ್ನು ಎದುರು ನೋಡುತ್ತಿದ್ದು, ಪಂಜಾಬ್ ಕಿಂಗ್ಸ್ ಹೊಸ ರೂಪ ನೀಡುವುದಾಗಿ ತಿಳಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಇತಿಹಾಸದಲ್ಲಿ 2 ಬಾರಿ ಮಾತ್ರ ಪ್ಲೇಆಫ್ ತಲುಪಿಸಿದ್ದು, ಕಳೆದ 10 ವರ್ಷಗಳಲ್ಲಿ ಒಂದು ಬಾರಿಯೂ ಪ್ಲೇಆಫ್ ಕೂಡಾ ಪ್ರವೇಶಿಸಿಲ್ಲ. 2024ನೇ ಸಾಲಿನಲ್ಲಿ 9ನೇ ಸ್ಥಾನಕ್ಕೆ ಕುಸಿದು ನಿರಾಸೆ ಉಂಟು ಮಾಡಿತ್ತು.