ಐದು ಬಾರಿ ಪ್ರಶಸ್ತಿ ತಂದುಕೊಟ್ಟ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮ ಮುಂದಿನ ಆವೃತ್ತಿಯಲ್ಲಿ ಯಾವ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆಗಳು ಆರಂಭಗೊಂಡಿವೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ನಾಯಕತ್ವ ಕಳೆದುಕೊಂಡ ನಂತರ ಮುಜುಗರಕ್ಕೆ ಒಳಗಾಗಿರುವ ರೋಹಿತ್ ಶರ್ಮ ತಂಡ ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ರೋಹಿತ್ ಶರ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ರೋಹಿತ್ ಶರ್ಮ ಅವರನ್ನು ಸೆಳೆಯಲು ಮುಂದಾಗಿದೆ ಎಂದು ಮೂಲಗಳು ಹೇಳಿವೆ.
ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್, ರೋಹಿತ್ ಶರ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೇರಿಕೊಳ್ಳಲಿದ್ದು, ಆ ತಂಡವನ್ನು ಮುನ್ನಡೆಸುವ ಸಾಧ್ಯತೆ ಎಂದು ಮುನ್ಸೂಚನೆ ನೀಡಿದ್ದಾರೆ.
2025ರಲ್ಲಿ ರೋಹಿತ್ ಶರ್ಮ ಐಪಿಎಲ್ ಹರಾಜಿನಲ್ಲಿ ಪಾಲ್ಗೊಳ್ಳಲಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮನ್ ಆಗಿರುವ ರೋಹಿತ್ ಶರ್ಮ, ಭಾರತ ತಂಡದ ನಾಯಕ ಮಾತ್ರವಲ್ಲ, ಮುಂಬೈ ಇಂಡಿಯನ್ಸ್ ತಂಡವನ್ನು 5 ಬಾರಿ ಪ್ರಶಸ್ತಿಯತ್ತ ಮುನ್ನಡೆಸಿದ ಚಾಣಕ್ಷ ನಾಯಕ.