ಭಾರತ ತಂಡದ ನಾಯಕ ರೋಹಿತ್ ಶರ್ಮ ಟಿ-20 ವಿಶ್ವಕಪ್ ಮೊದಲ ಪಂದ್ಯದಲ್ಲಿ ಎರಡು ದಾಖಲೆ ಬರೆದಿದ್ದಾರೆ.
ಐರ್ಲೆಂಡ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ 8 ವಿಕೆಟ್ ಗೆಲುವು ಸಾಧಿಸಿದ ರೋಹಿತ್ ಶರ್ಮ ಟಿ-20 ಕ್ರಿಕೆಟ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ನಂತರ ಅತ್ಯಂತ ಯಶಸ್ವಿ ನಾಯಕ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಮತ್ತೊಂದೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 600 ಸಿಕ್ಸರ್ ಬಾರಿಸಿದ ತಮ್ಮದೇ ವಿಶ್ವದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 600 ಸಿಕ್ಸರ್ ಬಾರಿಸಿದ ಮೊದಲಿಗ ರೋಹಿತ್ ಶರ್ಮ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ 553 ಸಿಕ್ಸರ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಭಾರತದ ಅತ್ಯಂತ ಯಶಸ್ವಿ ನಾಯಕರಾಗಿದ್ದರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಆಡಿದ 73 ಪಂದ್ಯಗಳ ಪೈಕಿ 41ರಲ್ಲಿ ಗೆಲುವು ಸಾಧಿಸಿದೆ. (ಸೂಪರ್ ಓವರ್ ಜಯ ಪರಿಗಣಿಸಲಾಗಿಲ್ಲ). ರೋಹಿತ್ ಶರ್ಮ ಸಾರಥ್ಯದಲ್ಲಿ ಭಾರತ ತಂಡ 55 ಪಂದ್ಯಗಳಲ್ಲಿ 42ರಲ್ಲಿ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡ 50 ಪಂದ್ಯಗಳ ಪೈಕಿ 30ರಲ್ಲಿ ಗೆಲುವು ಕಂಡಿದೆ.
ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಾಬರ್ ಅಜಮ್ 81 ಪಂದ್ಯಗಳ ಪೈಕಿ 46ರಲ್ಲಿ ಜಯ ಸಾಧಿಸಿ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ನ ಇಯಾನ್ ಮಾರ್ಗನ್ ಮತ್ತು ಆಫ್ಘಾನಿಸ್ತಾನದ ಅಸ್ಗರ್ ಅಫ್ಜನ್ ತಲಾ 42 ಪಂದ್ಯಗಳ ಗೆಲುವಿನ ದಾಖಲೆ ಹೊಂದಿದ್ದಾರೆ.