ಹಿಟ್ ಮ್ಯಾನ್ ಎಂದೇ ಖ್ಯಾತಿ ಪಡೆದ ಭಾರತ ತಂಡದ ನಾಯಕ ರೋಹಿತ್ ಶರ್ಮ ಆಸ್ಟ್ರೇಲಿಯಾ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದಿದ್ದಾರೆ.
ರೋಹಿತ್ ಶರ್ಮ 41 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಾಯದಿಂದ 92 ರನ್ ಬಾರಿಸಿ ಔಟಾಗಿದ್ದರಿಂದ 8 ರನ್ ಗಳಿಂದ ಶತಕ ತಪ್ಪಿಸಿಕೊಂಡರು. ಆದರೂ ರೋಹಿತ್ ಅಬ್ಬರದ ಆಟದಿಂದ ಭಾರತ 5 ವಿಕೆಟ್ ಗೆ 205 ರನ್ ಗಳ ಬೃಹತ್ ಮೊತ್ತವನ್ನು ದಾಖಲಿಸಿತು.
ರೋಹಿತ್ ಶರ್ಮ 8 ಸಿಕ್ಸರ್ ಸಿಡಿಸುವ ಮೂಲಕ ಟಿ-20ಯಲ್ಲಿ 200 ಸಿಕ್ಸರ್ ಪೂರೈಸಿದ ಮೊದಲ ಆಟಗಾರ ಎಂಬ ವಿಶ್ವದಾಖಲೆಗೆ ಪಾತ್ರರಾದರು. ಅಲ್ಲದೇ ಆಡಿದ ಎಲ್ಲಾ ಎದುರಾಳಿ ತಂಡಗಳ ವಿರುದ್ಧವೂ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ಮತ್ತೊಂದು ದಾಖಲೆಗೆ ಪಾತ್ರರಾದರು.
ರೋಹಿತ್ ಶರ್ಮ ಟಿ-20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಮೊತ್ತೊಂದು ದಾಖಲೆ ಬರೆದರು. ರೋಹಿತ್ ಶರ್ಮ ಟಿ-20ಯಲ್ಲಿ 4165 ರನ್ ಕಲೆ ಹಾಕಿ, 4145 ರನ್ ಕಲೆ ಹಾಕಿ ಮೊದಲ ಸ್ಥಾನದಲ್ಲಿದ್ದ ಪಾಕಿಸ್ತಾನದ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ ಸಾಧನೆ ಮಾಡಿದರು. ಭಾರತದ ಮತ್ತೊಬ್ಬ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ 4103 ರನ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.