ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳು ಬೆಂಗಳೂರಿನ ಭಾರತೀನಗರದ ಪೊಲೀಸರ ಮುಂದೆ ಶರಣಾಗಿದ್ದಾರೆ.
ಕೊಲೆ ಮಾಡಿದ್ದಾಗಿ ಆರೋಪಿಗಳು ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿಗಳಾದ ಕಿರಣ್, ವಿಮಲ್ ಸೇರಿ ಐವರನ್ನ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕಿರಣ್ ಆರೋಪಿ ಎ-1 ಆಗಿರುವ ಜಗದೀಶ್ ಅಲಿಯಾಸ್ ಜಗ್ಗ ಭಾವ ಭಾಮೈದ ಆಗಿದ್ದಾನೆ.
ಪೊಲೀಸರ ವಿಚಾರಣೆ ವೇಳೆ ನನಗೂ ಬಿಕ್ಲು ಶಿವ ಜೊತೆ ವೈಷಮ್ಯ ಇತ್ತು. ಕೊಲೆ ಮಾಡುವಾಗ ವಿಡಿಯೋದಲ್ಲಿರುವುದು ನಾನು ಮಾತ್ರ. ಪ್ರಕರಣದಲ್ಲಿ ನನ್ನ ಭಾವ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್ ಜಗದೀಶನ ಪಾತ್ರ ಇಲ್ಲ ಎಂದು ಹೇಳಿದ್ದಾನೆ.
ನನ್ನ ಮತ್ತು ಬಿಕ್ಲು ಶಿವು ಮಧ್ಯೆ ಇದ್ದ ಮನಸ್ತಾಪ ಅಷ್ಟೇ. ಹಾಗಾಗಿ ನಾನೇ ಹತ್ಯೆ ಮಾಡಿದ್ದಿನಿ ಎಂದು ಆರೋಪಿ ಕಿರಣ್ ಹೇಳಿಕೆ ನೀಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಪ್ರಕರಣ ಸಂಬಂಧ ಮಾಜಿ ಸಚಿವ ಭೈರತಿ ಬಸವರಾಜುಗೆ ಪೊಲೀಸರು ನೋಟಿಸ್ ಕಳುಹಿಸಿದ್ದು, ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ನೋಟಿಸ್ ತಲುಪಿದ ಕೂಡಲೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಕ್ರೈಂ ನಂ 73/2025 ಸಂಬಂಧ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ವಿಚಾರಣೆ ಅವಶ್ಯಕತೆ ಹಿನ್ನೆಲೆ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಬುಲಾವ್ ನೀಡಿದ್ದಾರೆ.



