Monday, June 29, 2026
Google search engine
Homeರಾಜ್ಯಕ್ರಿಮಿನಲ್ ಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿ ಮೂವರು ಅಮಾನತು

ಕ್ರಿಮಿನಲ್ ಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿ ಮೂವರು ಅಮಾನತು

ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಐಸಿಸ್ ಉಗ್ರ ಸೇರಿದಂತೆ ಅಪರಾಧಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲ್, ಟೀವಿ ಸೇರಿದಂತೆ ಹಲವು ಸೌಲಭ್ಯ ನೀಡುವ ಮೂಲಕ ರಾಜಾತಿಥ್ಯ ನೀಡುತ್ತಿರುವ ವೀಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಈ ತೀರ್ಮಾನ ಪ್ರಕಟಿಸಿದರು.

ಸೋಮವಾರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡಿರುವ ವೀಡಿಯೊಗಳ ಪರಿಶೀಲನೆ ಹಾಗೂ ಜೈಲಿನ ವ್ಯವಸ್ಥೆಗಳ ತನಿಖೆಗೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಆರ್. ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ಸಿಂಗ್ ಒಳಗೊಂಡ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಾಗಿದ್ದು, ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಜೈಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಮ್ಯಾಗೇರಿ ಮತ್ತು ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ. ಸದ್ಯಕ್ಕೆ ಐಪಿಎಸ್ ಅಧಿಕಾರಿ ಜೈಲಿನ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಜೈಲಿನಲ್ಲಿ ಕ್ರಿಮಿನಲ್ ಗಳ ಮೋಜು-ಮಸ್ತಿಯ ವೀಡಿಯೊ ನಾಲ್ಕು ತಿಂಗಳ ಹಿಂದಿನದಾಗಿದೆ. ಇದು ಯಾವ ಜೈಲಲ್ಲಿ ಎಂಬ ಬಗ್ಗೆ ಪರಿಶೀಲನೆ ನಡೆಯಬೇಕಾಗಿದೆ. ಎಲ್ಲಾ ವೀಡಿಯೊಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 5000 ಕೈದಿಗಳಿದ್ದಾರೆ ಎಂದು ಅವರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments