Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜ್ಯ

ರಾಜ್ಯದ ಪಾಲಿಕೆಗಳಿಗೆ 2400 ಕೋಟಿ ರೂ. ಬಿಡುಗಡೆ: ಸಚಿವ ಬೈರತಿ ಸುರೇಶ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
byrati suresh

ಬೆಳಗಾವಿ ಅಧಿವೇಶನ: ರಾಜ್ಯದ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸುರೇಶ್ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂತಹ ದಿಟ್ಟ ನಿರ್ಧಾರವನ್ನು ಕೈಗೊಂಡಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಪ್ರಥಮ ಎಂದು ಹೇಳಿದರು.

ಈ ಹಿಂದೆ ಯಾವುದೇ ಸರ್ಕಾರವಾಗಲೀ, ಮುಖ್ಯಮಂತ್ರಿಗಳಾಗಲೀ ಮಹಾನಗರ ಪಾಲಿಕೆಗಳಿಗೆ ಇಷ್ಟೊಂದು ಪ್ರಮಾಣದ ಅನುದಾನವನ್ನು ನೀಡಿರಲಿಲ್ಲ. ಸರ್ಕಾರದ ಈ ವಿಶೇಷ ಅನುದಾನ ಪ್ರತಿಯೊಂದು ಪಾಲಿಕೆಗಳಿಗೂ ತಲುಪಲಿದ್ದು, ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಲಿದೆ ಎಂದರು.

ಇದಕ್ಕೂ ಮುನ್ನ ಸದಸ್ಯ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂಖಾನ್ ಅವರ ಪರವಾಗಿ ಉತ್ತರ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರವನ್ನು ಪಟ್ಟಣ ಪಂಚಾಯತ್ ನಿಂದ ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಾಧ್ಯವಿಲ್ಲ ಎಂದರು.

2011 ರ ಜನಗಣತಿ ಪ್ರಕಾರ ಈ ಪಟ್ಟಣದಲ್ಲಿ 19 ಸಾವಿರ ಜನಸಂಖ್ಯೆ ಇದೆ. ಆದರೆ, ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು 20 ರಿಂದ 50 ಸಾವಿರ ಜನಸಂಖ್ಯೆ ಇರಬೇಕು. ಈ ಮಾನದಂಡದ ಆಧಾರದ ಮೇಲೆ ಪೌರಾಡಳಿತ ಇಲಾಖೆ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ವಿವರಿಸಿದರು. ಹೀಗಿದ್ದರೂ, ಇನ್ನೊಮ್ಮೆ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ನಡೆಸಿ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment