Thursday, November 21, 2024
Google search engine
Homeತಾಜಾ ಸುದ್ದಿಬೆಂಗಳೂರಿನಲ್ಲಿ ಕುಡಿಯುವ ನೀರು ದುರ್ಬಳಕೆ ಮಾಡಿದರೆ 5000 ರೂ. ದಂಡ!

ಬೆಂಗಳೂರಿನಲ್ಲಿ ಕುಡಿಯುವ ನೀರು ದುರ್ಬಳಕೆ ಮಾಡಿದರೆ 5000 ರೂ. ದಂಡ!

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದ್ದು, ದುರ್ಬಳಕೆ ಮಾಡಿದರೆ 5 ಸಾವಿರ ರೂ. ದಂಡ ವಿಧಿಸುವುದಾಗಿ ಹೇಳಿದೆ.

ಕಾರು ತೊಳೆಯಲು, ಕೈದೋಟ, ನಿರ್ಮಾಣ ಕಾಮಗಾರಿ, ನೀರಿನ ಕಾರಂಜಿ ಮತ್ತು ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕುಡಿಯುವ ನೀರಿನ ಬಳಕೆಯನ್ನು ನಿಷೇಧಿಸಲಾಗಿದ್ದು, ಈ ಉದ್ದೇಶಗಳಿಗೆ ಉಲ್ಲಂಘಿಸಿದರೆ ದಂಡ ಪಾವತಿಸಬೇಕಾಗುತ್ತದೆ.

ಬೆಂಗಳೂರು ನಗರದಲ್ಲಿ ಕಾಯಂ ನಿವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನರಿದ್ದು, ಎಲ್ಲರಿಗೂ ಕುಡಿಯುವ ನೀರು ಪೂರೈಕೆ ಮಾಡುವುದು ಅಗತ್ಯವಾಗಿದೆ. ನಗರದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ತಿಳಿಸಲಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ವಾಹನಗಳ ಸ್ವಚ್ಛತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಕಾರಂಜಿ ವ್ಯವಸ್ಥೆಗೆ, ಕುಡಿಯುವ ನೀರು ಹೊರತುಪಡಿಸಿ ಚಿತ್ರಮಂದಿರಗಳು ಮತ್ತು ಮಾಲ್‌ಗಳಲ್ಲಿ ಇತರ ಬಳಕೆಗೆ ಮತ್ತು ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಆದೇಶದ ಉಲ್ಲಂಘನೆಯಾದರೆ ಅಂತವರ ವಿರುದ್ಧ ಜಲಮಂಡಳಿಯು 5 ಸಾವಿರ ರೂ.ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆ ಮತ್ತೆ ಮರುಕಳಿಸಿದರೆ, 5 ಸಾವಿರದ ಜೊತೆಗೆ ಪ್ರತಿದಿನಕ್ಕೆ 500 ರೂ. ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.

ನಗರದಲ್ಲಿ ಟ್ಯಾಂಕರ್ ಮಾಲೀಕರು ಗ್ರಾಹಕರನ್ನು ಸುಲಿಗೆ ಮಾಡುತ್ತಿದ್ದಾರೆ ಎಂಬ ನಿರಂತರ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಡಳಿತ ಗುರುವಾರ ಟ್ಯಾಂಕರ್ ನೀರಿನ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments