Sunday, June 28, 2026
Google search engine
Homeರಾಜ್ಯರಾಜ್ಯದ ಅಭಿವೃದ್ಧಿ, ಶಾಸಕರ ಅನುದಾನಕ್ಕೆ 8000 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿ, ಶಾಸಕರ ಅನುದಾನಕ್ಕೆ 8000 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ಎಚ್.ಡಿ. ಕೋಟೆಯಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80  ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು  ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.

ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯ ವಿರುದ್ಧವೇ ಹೊರತು ನಮ್ಮ ಕಾಂಗ್ರೆಸ್ ಸರ್ಕಾರದ ಮೇಲಲ್ಲ ಎಂದು ಬಿಜೆಪಿ ಯ ಜನಕ್ರೋಶ ಯಾತ್ರೆಯನ್ನು ವ್ಯಂಗ್ಯವಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments