Friday, May 15, 2026
Google search engine
Homeದೇಶಲಾಕ್‌ ಡೌನ್‌ ಇಲ್ಲವೇ ಇಲ್ಲ: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ ಸ್ಪಷ್ಟನೆ

ಲಾಕ್‌ ಡೌನ್‌ ಇಲ್ಲವೇ ಇಲ್ಲ: ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ ಸ್ಪಷ್ಟನೆ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಜಾರಿ ಮಾಡಲು ಸಿದ್ಧತೆ ನಡೆದಿದೆ ಎಂಬ ವರದಿಯನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್‌ ಸಿಂಗ್‌ ಪುರಿ ನಿರಾಕರಿಸಿದ್ದು, ಇದು ಶುದ್ಧ ಸುಳ್ಳು ಎಂದಿದ್ದಾರೆ.

ದೇಶಾದ್ಯಂತ ಕೊರೊನಾ ಸಮಯದಲ್ಲಿ ವಿಧಿಸಲಾಗಿದ್ದ ಲಾಕ್‌ ಡೌನ್‌ ಜಾರಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಈ ರೀತಿಯ ವದಂತಿಗಳನ್ನು ನಂಬಬೇಡಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಎಕ್ಸ್‌ ನಲ್ಲಿ ಸುದೀರ್ಘ ಪೋಸ್ಟ್‌ ಮಾಡಿರುವ ಅವರು, ಜಾಗತಿಕ ಮಟ್ಟದಲ್ಲಿ ಬಿಕ್ಕಟ್ಟು ಮುಂದುವರಿದಿದೆ. ಇಂಧನ ಪೂರೈಕೆಯ ಸರಪಳಿಯಲ್ಲಿ ಸಮಸ್ಯೆ ಎದುರಾಗಿದೆ. ಮೋದಿ ನೇತೃತ್ವದ ಸರ್ಕಾರದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments