Monday, June 22, 2026
Google search engine
Homeರಾಜಕೀಯಪ್ರೆಸ್ಟಿಜ್ ಅಪಾರ್ಟ್ ಮೆಂಟ್ ನಲ್ಲಿ ರಹಸ್ಯ ಸಭೆ: ಸದಾನಂದ ಗೌಡ ಬಾಂಬ್

ಪ್ರೆಸ್ಟಿಜ್ ಅಪಾರ್ಟ್ ಮೆಂಟ್ ನಲ್ಲಿ ರಹಸ್ಯ ಸಭೆ: ಸದಾನಂದ ಗೌಡ ಬಾಂಬ್

ಬೆಂಗಳೂರು: ನಗರದಲ್ಲಿ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್ ನಲ್ಲಿ ನಡೆದ ರಹಸ್ಯ ಸಭೆ ನಡೆದ ಬಗ್ಗೆ ಮಾಹಿತಿ ಬಂದಿದ್ದರೂ ಬಿಜೆಪಿ ನಾಯಕರ ಉದಾಸೀನದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆಯಿತು ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಡೆದ ಅಡ್ಡಮತದಾನ ಮಾಡಿದವರನ್ನು ಪತ್ತೆ ಹಚ್ಚಲು ಧರ್ಮ ಸ್ಥಳಕ್ಕೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದಾಗಲೇ ನಾವು ಎಚ್ಚೆತ್ತುಕೊಳ್ಳಬೇಕಿತ್ತು. ಜೂನ್ 13 ರಂದು ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ರಹಸ್ಯ ಸಭೆ ನಡೆದಿತ್ತು. ಈ ಬಗ್ಗೆ ಮಾಹಿತಿ ಇದ್ದರೂ ಉದಾಸೀನ ತೋರಲಾಯಿತು ಎಂದು ಆರೋಪಿಸಿದ್ದಾರೆ.

ಅಂದು ನನಗೆ ಹೆಬ್ಬಾಳದ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಿಂದ ಒಂದು ಕರೆ ಬಂದಿತ್ತು. ಕಾಂಗ್ರೆಸ್‌ನ ನಾಲ್ಕು ಪ್ರಮುಖ ನಾಯಕರು ಮತ್ತು ಬಿಜೆಪಿಯ ಕೆಲ ಶಾಸಕರು ಅಲ್ಲಿ ರಹಸ್ಯ ಸಭೆ ನಡೆಸುತ್ತಿದ್ದಾರೆ ಎಂದು ಆ ವ್ಯಕ್ತಿ ಮಾಹಿತಿ ನೀಡಿದರು. ನಾನು ತಕ್ಷಣವೇ ಅಲರ್ಟ್ ಆಗಿ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಿಗೆ ಮತ್ತು ಆರ್. ಅಶೋಕ್ ಅವರಿಗೆ ಕರೆ ಮಾಡಿದೆ. ಆದರೆ ಇಬ್ಬರೂ ಸಿಗಲಿಲ್ಲ. ತಕ್ಷಣವೇ ರಾಜ್ಯ ಪ್ರಧಾನ ಕಾರ್ಯದರ್ಶಿಯೊಬ್ಬರಿಗೆ ಕಾಲ್ ಮಾಡಿ ವಿಷಯ ತಿಳಿಸಿದೆ. ಅವರು ‘ಸರಿ ನೋಡ್ತೇನೆ’ ಎಂದರು. ಆದರೆ ಮರುದಿನವೇ ಅದೇ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ಪಕ್ಕದ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ ಎರಡನೇ ಸಭೆಯೂ ನಡೆಯಿತು! ಆಗಲೂ ನಾನು ಅದೇ ಪ್ರಧಾನ ಕಾರ್ಯದರ್ಶಿಗೆ ಕರೆ ಮಾಡಿ ಎಚ್ಚರಿಸಿದೆ. ಆದರೆ ನಮ್ಮವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಹೇಳಿದ್ದಾರೆ.

ವಿಪರ್ಯಾಸ ಎಂದರೆ, ಅಡ್ಡಮತದಾನ ನಡೆದು ಪಕ್ಷಕ್ಕೆ ಭಾರಿ ಮುಖಭಂಗವಾದ ಮೇಲೆ ಅದೇ ಪ್ರಧಾನ ಕಾರ್ಯದರ್ಶಿ ಡಿವಿಎಸ್ ಅವರಿಗೆ ಕರೆ ಮಾಡಿ, “ಅಣ್ಣ ನೀವು ಹೇಳಿದ ಹಾಗೆಯೇ ಆಯ್ತಲ್ಲ!’ ಎಂದಿದ್ದರು. ಅದಕ್ಕೆ ಸದಾನಂದ ಗೌಡರು, “ಹೊಳೆ ದಾಟಿದ ಮೇಲೆ ಮತ್ತೇನು ಚರ್ಚೆ?” ಎಂದು ಬೇಸರದಿಂದಲೇ ಸುಮ್ಮನಾಗಿದ್ದಾರೆ.

ನಾನು ರಾಜ್ಯಾಧ್ಯಕ್ಷರಿಗೆ ಕರೆ ಮಾಡಿ ಸ್ಪಷ್ಟವಾಗಿ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ಧರ್ಮದ ಕ್ಷೇತ್ರಕ್ಕೆ ರಾಜಕೀಯವನ್ನು ತೆಗೆದುಕೊಂಡು ಹೋಗಬೇಡಿ. ದೇವರ ಹತ್ತಿರವೂ ರಾಜಕೀಯ ಹೋಗುವುದಾದರೆ ಎಲ್ಲವನ್ನೂ ದೇವರಿಗೇ ಬಿಟ್ಟುಬಿಡಿ. ದೇವರೇ ರಾಜಕೀಯ ಮಾಡಲಿ! ನಮ್ಮಿಂದ ರಾಜಕೀಯ ಮಾಡಲು ಆಗದಿದ್ದರೆ ದೇವರಿಗೇ ಬಿಟ್ಟುಬಿಡಿ” ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments