Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಕ್ರೀಡೆ

ರಾಜಸ್ಥಾನ್ ಗೆ `ಪ್ರಸಿದ್ಧ’ ಸೋಲುಣಿಸಿದ ಸಾಯಿ; ಅಗ್ರಸ್ಥಾನಕ್ಕೆ ಜಿಗಿದ ಗುಜರಾತ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
sai sudarshan

ಆರಂಭಿಕ ಸಾಯಿ ಸುದರ್ಶನ್ ಅವರ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 58 ರನ್ ನಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದೆ.

ಅಹಮದಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 216 ರನ್ ಕಲೆಹಾಕಿತು. ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 19.1 ಓವರ್ ಗಳಲ್ಲಿ 159 ರನ್ ಗೆ ಆಲೌಟಾಯಿತು.

ಕಠಿಣ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ ಆರಂಭದಿಂದಲೇ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲಿನ ಹಾದಿ ಹಿಡಿಯಿತು. ನಾಯಕ ಸಂಜು ಸ್ಯಾಮ್ಸನ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 41 ರನ್ ಬಾರಿಸಿ ಔಟಾದರೆ, ಶಿರ್ಮೊನ್ ಹೆಟ್ಮೇಯರ್ 32 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 52 ರನ್ ಗಳಿಸಿ ಔಟಾದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭದಲ್ಲೇ ನಾಯಕ ಶುಭಮನ್ ಗಿಲ್ (2) ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಆದರೆ ಸಾಯಿ ಸುದರ್ಶನ್ 53 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ 82 ರನ್ ಚಚ್ಚಿದರು.

ಮಧ್ಯಮ ಕ್ರಮಾಂಕದಲ್ಲಿ ಜೋಸ್ ಬಟ್ಲರ್ (36) ಮತ್ತು ಶಾರೂಖ್ ಖಾನ್ (36) ರಾಹುಲ್ ತೆವಾಟಿಯಾ (ಅಜೇಯ24) ಉಪಯುಕ್ತ ಕಾಣಿಕೆ ನೀಡಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment