Monday, June 29, 2026
Google search engine
Homeಕ್ರೀಡೆಇಂಗ್ಲೆಂಡ್ ಪಾಲಿಗೆ ಸಂಜು ನಂಜು: 253 ರನ್ ಪೇರಿಸಿದ ಭಾರತ

ಇಂಗ್ಲೆಂಡ್ ಪಾಲಿಗೆ ಸಂಜು ನಂಜು: 253 ರನ್ ಪೇರಿಸಿದ ಭಾರತ

ಆರಂಭಿಕ ಸಂಜು ಸ್ಯಾಮ್ಸನ್ ಸತತ ಎರಡನೇ ಬಾರಿ ಶತಕ ಗಳಿಸುವ ಅವಕಾಶ ಕೈ ತಪ್ಪಿಸಿಕೊಂಡರೂ ಭಾರತ ತಂಡ ಟಿ-20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಬೃಹತ್ ಮೊತ್ತ ಪೇರಿಸಲು ನೆರವಾದರು.

ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 253 ರನ್ ಪೇರಿಸಿತು.

ಸೂಪರ್ ಸಿಕ್ಸ್ ಪಂದ್ಯದಲ್ಲಿ ಫಾರ್ಮ್ ಕಂಡುಕೊಂಡಿದ್ದ ಸಂಜು ಸ್ಯಾಮ್ಸನ್ ಸೆಮಿಫೈನಲ್ ಪಂದ್ಯದಲ್ಲೂ ಮಿಂಚಿನ ಆಟವಾಡಿ ಶತಕದ ಹೊಸ್ತಿಲಲ್ಲಿ ಎಡವಿದರು. ಆದರೂ ಭಾರತ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡ 89 ರನ್ ಬಾರಿಸಿ ಜಾಕ್ಸ್ ಗೆ ವಿಕೆಟ್ ಒಪ್ಪಿಸಿದರು.

ಆರಂಭಿಕ ಅಭಿಷೇಕ್ ಶರ್ಮ (9) ವಿಕೆಟ್ ಬೇಗನೇ ಕಳೆದುಕೊಂಡ ನಂತರ ಜೊತೆಯಾದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ (39) ಎರಡನೇ ವಿಕೆಟ್ ಗೆ 97 ರನ್ ಜೊತೆಯಾಟ ನಿಭಾಯಿಸಿದರು.

ನಂತರ ಬಂದ ಶಿವಂ ದುಬೆ 25 ಎಸೆತಗಳಲ್ಲಿ 1 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 43 ರನ್ ಚಚ್ಚಿದರು. ಹಾರ್ದಿಕ್ ಪಾಂಡ್ಯ (27) ಮತ್ತು ತಿಲಕ್ ವರ್ಮಾ (21) ಸಿಡಿಲಬ್ಬರದ ಆಟವಾಡಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments