ಅನಾರೋಗ್ಯದಿಂದ ಬಳಲುತ್ತಿದ್ದ ಎಡಪಕ್ಷದ ಹಿರಿಯ ನಾಯಕ ಸೀತಾರಾಮ್ ಯೆಚೂರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ನ್ಯೂಮೆನಿಯಾದಿಂದ ಕೆಲವು ದಿನಗಳಿಂದ ಬಳಲುತ್ತಿದ್ದ ಸೀತಾರಾಮ್ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
2015ರಿಂದ ಸಿಪಿಎಂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಸೀತಾರಾಮ್ ಯೆಚೂರಿ ಮಾಜಿ ರಾಜ್ಯಸಭಾ ಸದಸ್ಯರೂ ಆಗಿದ್ದರು.
ಸೀತಾರಾಮ್ ಯೆಚೂರಿ ಅವರಿಗೆ ಕೆಲವು ದಿನಗಳಿಂದ ಕೃತಕ ಉಸಿರಾಟದ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು. 1974ರಲ್ಲಿ ವಿದ್ಯಾರ್ಥಿ ಸಂಘಟನೆ ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾಗೆ ಸೇರ್ಪಡೆಯಾದ ಸೀತಾರಾಮ್ ಯೆಚೂರಿ ಕೆಲವೇ ವರ್ಷದಲ್ಲಿ ಎಡಪಕ್ಷ ಸಿಪಿಎಂಗೆ ಸೇರ್ಪಡೆಯಾದರು. ನಂತರ ತುರ್ತು ಪರಿಸ್ಥಿತಿ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಜೈಲು ಸೇರಿದ್ದರು.