Thursday, November 21, 2024
Google search engine
Homeತಾಜಾ ಸುದ್ದಿಹಾಸ್ಟೇಲ್ ಕೊಠಡಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಪುತ್ರಿ ಶವಪತ್ತೆ

ಹಾಸ್ಟೇಲ್ ಕೊಠಡಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಪುತ್ರಿ ಶವಪತ್ತೆ

ಹಿರಿಯ ಪೊಲೀಸ್ ಅಧಿಕಾರಿಯ 19 ವರ್ಷದ ಮಗಳ ಶವ ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಹಾಸ್ಟೇಲ್ ಕೊಠಡಿಯಲ್ಲಿ ಪತ್ತೆಯಾಗಿದೆ.

ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅಂಕಿತಾ ರಸ್ತೋಗಿ ಮೃತಪಟ್ಟ ದುರ್ದೈವಿ.

ಹಾಸ್ಟೇಲ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಂಕಿತಾ ರಸ್ತೋಗಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಮಹಾರಾಷ್ಟ್ರ ಘಟಕದ 1998ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಸಂಜಯ್ ರಸ್ತೋಗಿ ಪ್ರಸ್ತುತ ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ)ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಅಂಕಿತಾ ಸಾವಿಗೆ ಸ್ಪಷ್ಟಕಾರಣ ತಿಳಿದು ಬಂದಿಲ್ಲ. ಆದರೆ ಪ್ರಾಥಮಿಕ ಮಾಹಿತಿ ಪ್ರಕಾರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ನಂತರ ಸ್ಪಷ್ಟ ಕಾರಣ ತಿಳಿದು ಬರಲಿದೆ.

ಹಾಸ್ಟೇಲ್ ಕೊಠಡಿ ಒಳಗಡೆಯಿಂದ ಮುಚ್ಚಲಾಗಿದ್ದು, ಮೃತಪಟ್ಟ ಅಂಕಿತಾ ದೇಹದ ಮೇಲೆ ಗಾಯದ ಗುರುತುಗಳಿವೆ. ಅನುಮಾನಸ್ಪದವಾದ ಯಾವುದೇ ಅಂಶಗಳು ಕಂಡು ಬರುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments