ಕಳೆದ 15 ದಿನಗಳಲ್ಲಿ 10 ಸೇತುವೆಗಳು ಕುಸಿತ ಪ್ರಕರಣದಲ್ಲಿ 16 ಇಂಜಿನಿಯರ್ ಗಳನ್ನು ಅಮಾನತುಗೊಳಿಸಿ ಬಿಹಾರ ಸರ್ಕಾರ ಆದೇಶ ಹೊರಡಿಸಿದೆ.
ಸೇತುವೆ ಕುಸಿತ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜಲ ಸಂಪನ್ಮೂಲ ಇಲಾಖೆಯ 16 ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದ್ದು, ಸೇತುವೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಪತ್ತೆ ಹಚ್ಚಿ ಅವರ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬಿಹಾರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಚೈತನ್ಯ ಪ್ರಸಾದ್ ತಿಳಿಸಿದ್ದಾರೆ.
ಸರಣ್ ಜಿಲ್ಲೆಯಲ್ಲಿ ಗುರುವಾರ ಎರಡು ಸೇತುವೆಗಳು ಕುಸಿದಿದ್ದವು. ಜಿಲ್ಲೆಯೊಂದರಲ್ಲೇ 3 ಸೇತುವೆಗಳು ಕುಸಿದಿದ್ದವು. ಇದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಸರಣಿ ಸೇತುವೆ ಕುಸಿತ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಿಗಳ ಸಭೆ ನಡೆಸಿದ್ದು, ತನಿಖೆಗೆ ಆದೇಶಿಸಿದ್ದರು.