Thursday, November 21, 2024
Google search engine
Homeತಾಜಾ ಸುದ್ದಿಶಿವಣ್ಣಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆ: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ?

ಶಿವಣ್ಣಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆ: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ?

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಆರೋಗ್ಯ ಸಮಸ್ಯೆ ಕಾಡುತ್ತಿದ್ದು, ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುವ ಸಾಧ್ಯತೆ ಇದೆ.

60 ವರ್ಷದ ಹಿರಿಯ ನಟ ಶಿವರಾಜ್ ಕುಮಾರ್ ಸ್ವತಃ ಈ ವಿಷಯವನ್ನು ಬಹಿರಂಗಪಡಿಸಿದ್ದು, ಹೌದು, ನನಗೆ ಆರೋಗ್ಯದಲ್ಲಿ ಸಮಸ್ಯೆ ಇದೆ. ಇದರಲ್ಲಿ ಮುಚ್ಚಿಡುವುದು ಏನಿದೆ? ಇಲ್ಲಿಯೇ ಚಿಕಿತ್ಸೆ ಪಡೆಯಬೇಕೋ ಅಥವಾ ಅಮೆರಿಕದಲ್ಲಿ ಚಿಕಿತ್ಸೆ ಪಡೆಯಬೇಕೋ ಎಂದು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ಭೈರತಿ ರಣಗಲ್ ಚಿತ್ರದ ಪ್ರಮೋಷನ್ ಗಾಗಿ ಖಾಸಗಿ ಯೂ ಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಶಿವರಾಜ್ ಕುಮಾರ್, ನನಗೆ ಆರೋಗ್ಯ ಸಮಸ್ಯೆ ಇದೆ. ನಾನು ಸುಳ್ಳು ಹೇಳಲ್ಲ. ನಾನು ಮನುಷ್ಯ ತಾನೇ. ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಒಂದು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಹೇಳಲಾಗಿದೆ ಎಂದು ಅವರು ಹೇಳಿದರು.

ನಾಲ್ಕು ಸೆಷನ್ ಚಿಕಿತ್ಸೆ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ. ಒಂದು ಸರ್ಜರಿ ನಡೆಯಬೇಕಿದೆ. ಅಮೆರಿಕದಲ್ಲಿ ಮಾಡೋದಾ ಅಥವಾ ಇಲ್ಲಿ ಮಾಡೋದಾ ಎನ್ನುವ ಬಗ್ಗೆ ಯೋಚನೆ ನಡೆಯುತ್ತಿದೆ. ಅಮೆರಿಕದಲ್ಲಿ ಮಾಡೋದು ಎಂದಾದರೆ ಒಂದು ತಿಂಗಳು ನಾನು ಅಲ್ಲಿಗೆ ಹೋಗಬೇಕಾಗುತ್ತದೆ. ಜನವರಿಯಿಂದ ನಾನು ಫುಲ್ ಫಾರ್ಮ್ ಶಿವಣ್ಣ ಬರ್ತಾರೆ ಎಂದು ಅವರು ಹೇಳಿದ್ದಾರೆ.

ಅಭಿಮಾನಿಗಳು ಸೆಲ್ಫಿ ಫೋಟೊ ತೆಗೆದುಕೊಳ್ಳಲು ಬಂದಾಗ ಹತ್ತಿರ ಬರಬೇಡಿ ಎಂದು ಹೇಳುತ್ತಿದ್ದೇನೆ. ಏಕೆಂದರೆ ಅವರಿಗೆ ಸೋಂಕು ತಗುಲಬಾರದು ಎಂಬ ಕಾರಣಕ್ಕಾಗಿ ಅಷ್ಟೆ. ಆರೋಗ್ಯ ಸಮಸ್ಯೆ ನಡುವೆಯೇ ಭೈರತಿ ರಣಗಲ್ ಮಾಡಿದ್ದೇನೆ. 45 ಚಿತ್ರದ ಚಿತ್ರೀಕರಣವನ್ನು ಕೂಡ ಮುಗಿಸಿದ್ದೇನೆ ಎಂದು ಶಿವರಾಜ್ ಕುಮಾರ್ ವಿವರಿಸಿದ್ದಾರೆ.

ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆ ಕುರಿತು ಮೊದಲ ಬಾರಿ ಬಹಿರಂಗಪಡಿಸಿದ್ದರೂ ಯಾವ ಸಮಸ್ಯೆ ಎಂದು ಹೇಳಿಕೊಂಡಿಲ್ಲ. ಅಲ್ಲದೇ ಈ ವಿಷಯ ಸುದೀಪ್, ಯಶ್ ಅವರಿಗೂ ಮೊದಲೇ ತಿಳಿದಿದೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments