Sunday, May 17, 2026
Google search engine
Homeಕ್ರೀಡೆಶುಭಮನ್ ಗಿಲ್ ಚೊಚ್ಚಲ ದ್ವಿಶತಕ: ಆಂಗ್ಲರ ನಾಡಿನಲ್ಲಿ ದಾಖಲೆ!

ಶುಭಮನ್ ಗಿಲ್ ಚೊಚ್ಚಲ ದ್ವಿಶತಕ: ಆಂಗ್ಲರ ನಾಡಿನಲ್ಲಿ ದಾಖಲೆ!

ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಮೋಘ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ದಾಖಲೆ ನಿರ್ಮಿಸಿದ್ದಾರೆ.

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಗುರುವಾರ ಶುಭಮನ್ ಗಿಲ್ 311 ಎಸೆತಗಳಲ್ಲಿ 21 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಸಿ ದ್ವಿಶತಕ ಸಂಪಾದಿಸಿದರು.

ಗಿಲ್ ದ್ವಿಶತಕದ ಸಾಧನೆಯೊಂದಿಗೆ ಭಾರತ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ಗೆ 472 ರನ್ ಗಳಿಸಿದ್ದು, ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.

ಗಿಲ್ ನಾಯಕ ಪಟ್ಟ ಅಲಂಕರಿಸಿದ ಮೊದಲ ಟೆಸ್ಟ್ ನಲ್ಲಿ ಶತಕ ಸಿಡಿಸಿದರೆ, ಎರಡನೇ ಟೆಸ್ಟ್ ನಲ್ಲಿ ದ್ವಿಶತಕ ಸಂಪಾದಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಗಿಲ್ ಪಾತ್ರರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments