Thursday, July 9, 2026
Google search engine
Homeರಾಜ್ಯಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ: ಸಿದ್ದರಾಮಯ್ಯ

ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನ ಭಾಗ್ಯ ಜಾರಿಗೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌

ಶಿರೂರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಮತಯಾಚಿಸಿದರು.

ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿ ಆಗಿದ್ದಾಗ ಆಹಾರ‌ ಭದ್ರತಾ ಕಾಯ್ದೆ ಜಾರಿ ಮಾಡಿದ್ದರಿಂದ ಇಲ್ಲಿ ನಾನು ಅನ್ನಭಾಗ್ಯ ಜಾರಿಗೆ ತರಲು ಸಾಧ್ಯವಾಯಿತು. ಆದ್ದರಿಂದ ಕಾಂಗ್ರೆಸ್ ಪಕ್ಷದ ಕಾಳಜಿಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಎಚ್.ವೈ.ಮೇಟಿಯವರು ಐದು ಬಾರಿ ಶಾಸಕರು, ಎರಡು ಬಾರಿ ಸಚಿವರು ಮತ್ತು ಒಮ್ಮೆ ಸಂಸದರಾಗಿ ಎಲ್ಲರನ್ನೂ ಗೌರವವಾಗಿ ಕಾಣುತ್ತಾ ಜಾತಿ ಸೋಂಕನ್ನು ಸೋಕಿಸಿಕೊಂಡಿರಲಿಲ್ಲ. ಬಡವರು ಮತ್ತು ಹಿಂದುಳಿದವರ ಪರವಾಗಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಉಮೇಶ್ ಮೇಟಿಯವರನ್ನು ಗೆಲ್ಲಿಸಿದರೆ ಎಚ್.ವೈ.ಮೇಟಿಯವರ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಒಂದು ಬಾರಿಯೂ ಅಧಿಕಾರಕ್ಕೆ ಬರಲಿಲ್ಲ. ಬಿಜೆಪಿಗೆ ರಾಜ್ಯದ ಜನರ ಆಶೀರ್ವಾದ ಇಲ್ಲದಿದ್ದರಿಂದ ಆಪರೇಷನ್ ಕಮಲದ ಮೂಲಕ ಅಪಾರ ಹಣ ಖರ್ಚು ಮಾಡಿ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದಿದ್ದಾರೆ. ನಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವ ಯಡಿಯೂರಪ್ಪ ಅವರಿಗೆ ಆಪರೇಷನ್ ಕಮಲ ಮಾಡಲು ಅಷ್ಟೊಂದು ಹಣ ಎಲ್ಲಿಂದ ಬಂತು ಎನ್ನುವುದನ್ನು ನೀವೆಲ್ಲಾ ಕೇಳಬೇಕಿದೆ ಎಂದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ಅತ್ಯಂತ ಭ್ರಷ್ಟರು ಎಂದು ಯತ್ನಾಳ್ ಅವರು ಹೇಳುತ್ತಾರೆ. ಅದೇ ಯತ್ನಾಳ್ ಅವರನ್ನು ಬಿಜೆಪಿ ನಾಯಕರು ಬಾಗಲಕೋಟೆಗೆ ಕರೆಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಬಿಜೆಪಿ ಸರ್ಕಾರದಲ್ಲಿ ನಡೆಯುವ ಕಮಿಷನ್ ದಂಧೆ ಬಗ್ಗೆ ಪತ್ರ ಬರೆದಿದ್ದರು. ಇಂಥಾ ಬಿಜೆಪಿಯವರಿಂದ ನಾವು ಭ್ರಷ್ಟಾಚಾರದ ಮಾತು ಕೇಳಬೇಕಾ ಎಂದು ವ್ಯಂಗ್ಯವಾಡಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ 165 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ದೇಶದ ಸಾಲವನ್ನು 218 ಕೋಟಿಗೆ ಹೆಚ್ಚಿಸಿದ್ದಾರೆ. ಆದ್ದರಿಂದ ಬಿಜೆಪಿ ಮಾತನ್ನು ತಿರಸ್ಕರಿಸಿ ಎಂದರು.

ಹಸಿವುಮುಕ್ತ ರಾಜ್ಯ ನಮ್ಮದಾಗಬೇಕು ಎನ್ನುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ತಂದೆ. ಆದ್ದರಿಂದ ನಾನು ಸಾಲದ ರಾಮಯ್ಯ ಅಲ್ಲ , ಅನ್ನದ ರಾಮಯ್ಯ ಎಂದು ಪುನರುಚ್ಚರಿಸಿದರು.

ದುಡಿಯುವವರ, ಮಹಿಳೆಯರ, ಶ್ರಮಿಕರ ಮತ್ತು ಹಿಂದುಳಿದವರ, ದಲಿತರ ವಿರೋಧಪಕ್ಷವಾದ ಬಿಕೆಪಿಯನ್ನು ಬೆಂಬಲಿಸಬೇಡಿ. ಉಮೇಶ್ ಮೇಟಿಯವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಿ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments