ಮುಡಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಉಲ್ಲೇಖಿಸಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಈ ಮೂಲಕ 40 ವರ್ಷಗಳ ರಾಜಕೀಯ ಜೀವನದಲ್ಲಿ ಮೊದಲ ಬಾರಿ ವಿಚಾರಣೆಯನ್ನು ಸಿದ್ದರಾಮಯ್ಯ ಎದುರಿಸುವಂತಾಗಿದೆ.
ನವೆಂಬರ್ .6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯಗೆ ನೋಟಿಸ್ ನಲ್ಲಿ ಲೋಕಾಯುಕ್ತ ಸೂಚನೆ ನೀಡಿದೆ.
ಪ್ರಕರಣದಲ್ಲಿ ಈಗಾಗಲೇ ಪ್ರಕರಣದ ಎ2 ಪಾರ್ವತಿ ಸಿದ್ದರಾಮಯ್ಯ, ಎ3 ಮಲ್ಲಿಕಾರ್ಜುನ ಹಾಗೂ ಎ4 ದೇವರಾಜು ಸೇರಿ ಹಲವರ ವಿಚಾರಣೆಯನ್ನು ಲೋಕಾಯುಕ್ತ ವಿಚಾರಣೆ ನಡೆಸಿದೆ.
ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿರುವ ಲೋಕಾಯುಕ್ತ ಸಿದ್ದರಾಮಯ್ಯ ಅವರ ವಿಚಾರಣೆ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಲಾಗಿದೆ.
ಸಿದ್ದರಾಮಯ್ಯ 40 ವರ್ಷಗಳ ರಾಜಕೀಯ ಜೀವನದಲ್ಲಿ ಮೊದಲ ವಿಚಾರಣೆ ಎದುರಿಸುವಂತಾಗಿದೆ. ಮುಂಬರುವ ರಾಜ್ಯದ ಮೂರು ವಿಧಾನಸಭಾ ಸ್ಥಾನಗಳ ಉಪ ಚುನಾವಣೆ ನಡೆಯಲಿದೆ. ಇದು ಚುನಾವಣೆಯ ಮೇಲೆ ಪ್ರಭಾವ ಬೀರುವುದೇ ಎಂಬುದು ಕಾದು ನೋಡಬೇಕಿದೆ.