ಮುಡಾ ಸೈಟು ಹಂಚಿಕೆ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಗೆ ತಡೆಯಾಜ್ಞೆ ಕುರಿತ ವಿಚಾರಣೆಯನ್ನು ಹೈಕೋರ್ಟ್ ಫೆ.20ಕ್ಕೆ ಮುಂದೂಡಿದೆ.
ಸೈಟು ಹಂಚಿಕೆ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ನೋಟಿಸ್ ಜಾರಿ ಮಾಡಿತ್ತು.
ಪ್ರಕರಣದಲ್ಲಿ ನೇರ ಭಾಗಿದಾರರಲ್ಲದ ತಮಗೆ ಇಡಿ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ಭೈರತಿ ಸುರೇಶ್ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣೆಯನ್ನು 10 ದಿನಗಳ ಕಾಲ ಮುಂದೂಡಿದೆ.
ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ ಆದೇಶದ ಅನ್ವಯ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗದ ಆರೋಪಿಗಳಿಗೆ ಇಡಿ ಸಮನ್ಸ್ ನೀಡುವಂತಿಲ್ಲ ಎಂದು ಭೈರತಿ ಸುರೇಶ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.



