ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ತಂದೆಯನ್ನೇ ಮಗ ಹೊಡೆದು ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆ (49) ಹತ್ಯೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂದು ವೃದ್ಧ ತಂದೆಯ ಮೇಲೆ ಬಾಳಾಸಾಬ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ತುಕಾರಾಮ ವನಖಂಡೆ ಅವರನ್ನು ಮಹಾರಾಷ್ಟ್ರದ ಮೀರಜ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಳಾಸಾಬ ಮಲ್ಲು ವನಖಂಡೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.