Saturday, November 23, 2024
Google search engine
Homeಅಪರಾಧಬೆಂಗಳೂರು: ಕೆಲಸಕ್ಕೆ ಹೋಗುವಂತೆ ಬುದ್ದಿ ಹೇಳಿದ ತಾಯಿಯನ್ನೇ ಇರಿದು ಕೊಂದ ಪಾಪಿ ಮಗ!

ಬೆಂಗಳೂರು: ಕೆಲಸಕ್ಕೆ ಹೋಗುವಂತೆ ಬುದ್ದಿ ಹೇಳಿದ ತಾಯಿಯನ್ನೇ ಇರಿದು ಕೊಂದ ಪಾಪಿ ಮಗ!

ಕೆಲಸಕ್ಕೆ ಹೋಗುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಇರಿದು ಹೆತ್ತತಾಯಿಯನ್ನೇ ಪಾಪಿ ಮಗ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪುಟ್ಟೇನಹಳ್ಳಿಯ ಶ್ರೀಕಂಠೇಶ್ವರ ಲೇಔಟ್‌ ನಿವಾಸಿ ಆಯೇಷಾ (50) ಮಗ ಶುಫಿಯಾನ್ (32) ಎಂಬಾತನಿಂದಲೇ ಹತ್ಯೆಯಾಗಿದ್ದಾರೆ.

ಶುಕ್ರವಾರ ಬೆಳಗ್ಗೆ 10 ಗಂಟೆ ಆದರೂ ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದ ಮಗನಿಗೆ ಕೆಲಸಕ್ಕೆ ಹೋಗುವಂತೆ ತಾಯಿ ಬುದ್ಧಿಮಾತು ಹೇಳಿದ್ದಾರೆ. ಇದರಿಂದ ತಾಯಿ ಮತ್ತು ಮಗನ ನಡುವೆ ವಾಗ್ವಾದ ಶುರುವಾಗಿದೆ. ಗಲಾಟೆ ವೇಳೆ ಮನೆಯಲ್ಲಿದ್ದ ಚಾಕುವಿನಿಂದ ಮಗ ಇರಿದು ತಾಯಿಯನ್ನು ಕೊಲೆ ಮಾಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments