Sunday, June 7, 2026
Google search engine
Homeಕಾನೂನುಸೋಲಿಗೆ ಎಸ್ ಐಆರ್ ಕಾರಣ: ಹೊಸದಾಗಿ ಅರ್ಜಿ ಸಲ್ಲಿಸಲು ಮಮತಾಗೆ ಸೂಚನೆ

ಸೋಲಿಗೆ ಎಸ್ ಐಆರ್ ಕಾರಣ: ಹೊಸದಾಗಿ ಅರ್ಜಿ ಸಲ್ಲಿಸಲು ಮಮತಾಗೆ ಸೂಚನೆ

ನವದೆಹಲಿ: ವಿಧಾನಸಭಾ ಚುನಾವಣೆಯ ಸೋಲಿಗೆ ಎಸ್ ಐಆರ್ ಕಾರಣ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್ ಸೂಕ್ತ ದಾಖಲೆಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ.

ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಸಮಯದಲ್ಲಿ ಗೆಲುವಿನ ಅಂತರವು ಡಿಲೀಟ್ ಮಾಡಿದ ಮತಗಳಿಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರಿಗೆ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಹಿರಿಯ ವಕೀಲ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 31 ಸ್ಥಾನಗಳಲ್ಲಿ, ಗೆಲುವಿನ ಅಂತರವು ಡಿಲೀಟ್ ಮಾಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಚುನಾವಣಾ ಆಯೋಗವು, ಈ ಅರ್ಜಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಚನಾವಣೆಗೆ ಸಂಬಂಧಿಸಿದ ಅರ್ಜಿಯಾಗಿದೆ. ಎಸ್‌ಐಆರ್‌ಗೆ ಸಂಬಂಧಿಸಿದ ವಿಷಯಗಳು ಮತ್ತು ಮತಗಳ ಸೇರ್ಪಡೆ ಅಥವಾ ಅಳಿಸುವಿಕೆಗೆ ಸಂಬಂಧಿಸಿದಂತೆ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದೆ.

ರಾಜ್ಯದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 207 ಸ್ಥಾನಗಳನ್ನು ಪಡೆದುಕೊಂಡಿದ್ದು, ಟಿಎಂಸಿ ಕೇವಲ 80 ಸ್ಥಾನಗಳನ್ನು ಗೆದ್ದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments