Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಕ್ರೀಡೆ

ಭಾರತಕ್ಕೆ 6 ರನ್ ರೋಚಕ ಜಯ: 2-2ರಿಂದ ಟೆಸ್ಟ್ ಸರಣಿ ಸಮ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
siraj

ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನಡೆಸಿ 5 ವಿಕೆಟ್ ಗೊಂಚಲು ಪಡೆಯುವ ಮೂಲಕ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 6 ರನ್ ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲದಲ್ಲಿ ಅಂತ್ಯಗೊಂಡಿದೆ.

ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 374 ರನ್ ಗಳ ಗುರಿ ಬೆಂಬತ್ತಿದ ಇಂಗ್ಲೆಂಡ್ 5ನೇ ಹಾಗೂ ಅಂತಿಮ ದಿನವಾದ ಸೋಮವಾರ 6 ವಿಕೆಟ್ ಗೆ 339 ರನ್ ಗಳಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ್ದು, ಭೋಜನ ವಿರಾಮಕ್ಕೂ ಮುನ್ನವೇ 367 ರನ್ ಗೆ ಆಲೌಟಾಯಿತು.

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-2ರಿಂದ ಹಿನ್ನಡೆ ಅನುಭವಿಸಿದ್ದ ಭಾರತಕ್ಕೆ ಸರಣಿಯಲ್ಲಿ ಸಮಬಲ ಸಾಧಿಸಿದರೆ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿತ್ತು. ಅಲ್ಲದೇ ಮೊದಲ ಇನಿಂಗ್ಸ್ ನಲ್ಲಿ ಹಿನ್ನಡೆ ಅನುಭವಿಸಿತ್ತು. ಈ ಎಲ್ಲಾ ಒತ್ತಡಗಳನ್ನು ಮೆಟ್ಟಿ ನಿಂತ ಭಾರತ ರೋಚಕ ಜಯ ಸಾಧಿಸಿ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ರನ್ ಅಂತರದಲ್ಲಿ ಗೆದ್ದ ದಾಖಲೆ ಬರೆಯಿತು.

ಕೊನೆಯ ದಿನದಾಟದಲ್ಲಿ 36 ರನ್ ಗಳಿಸಬೇಕಿದ್ದ ಇಂಗ್ಲೆಂಡ್ 30 ರನ್ ಅಂತರದಲ್ಲಿ 4 ವಿಕೆಟ್ ಕಳೆದುಕೊಂಡಿತು. ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಶತಕ ಬಾರಿಸಿ ನಡೆಸಿದ ಹೋರಾಟ ವ್ಯರ್ಥಗೊಂಡಿತು.

ಮೊಹಮದ್ ಸಿರಾಜ್ 5 ವಿಕೆಟ್ ಪಡೆದು ಪಂದ್ಯ ಹೀರೋ ಎನಿಸಿಕೊಂಡರು. ಕರ್ನಾಟಕದ ಪ್ರಸಿದ್ಧ ಕೃಷ್ಣ 4 ಹಾಗೂ ಅಕ್ಷ್ ದೀಪ್ 1 ವಿಕೆಟ್ ಕಬಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment