Thursday, July 16, 2026
Google search engine
Homeಕಾನೂನುಧರ್ಮಸ್ಥಳ ಬುರುಡೆ ಪ್ರಕರಣ: 255 ಸಾಕ್ಷಿ ಸೇರಿ 7,000 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್...

ಧರ್ಮಸ್ಥಳ ಬುರುಡೆ ಪ್ರಕರಣ: 255 ಸಾಕ್ಷಿ ಸೇರಿ 7,000 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್ ಐಟಿ

ಮಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (ಎಸ್​ಐಟಿ) ವಶಪಡಿಸಿಕೊಂಡಿದ್ದ ಸೊತ್ತುಗಳ ಸಹಿತ ಅಂತಿಮ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಬುಧವಾರ ಮಧ್ಯಾಹ್ನ ಸಲ್ಲಿಸಿದೆ.

ಎಸ್ಐಟಿ ಅಧಿಕಾರಿಗಳು ಮಧ್ಯಾಹ್ನ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಅಧಿಕಾರಿಗಳು ಒಂದು ವರ್ಷದ ಬಳಿಕ ಒಟ್ಟು 12 ಕಡತಗಳನ್ನು ಒಳಗೊಂಡಿರುವ 7 ಸಾವಿರಕ್ಕೂ ಅಧಿಕ ಪುಟಗಳ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯೊಂದಿಗೆ ವಿಡಿಯೋ ಹೇಳಿಕೆ ರೆಕಾರ್ಡ್​​ ಮಾಡಿದ ಹಾರ್ಡ್​ಡಿಸ್ಕ್​​ ಅನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತನಿಖೆಯ ಸಂದರ್ಭದಲ್ಲಿ ಒಟ್ಟು 255 ಸಾಕ್ಷಿಗಳ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ. ಅಲ್ಲದೆ, ಮಾನವನ ಬುರುಡೆ, ಅಸ್ಥಿಪಂಜರ, ಮೊಬೈಲ್ ಫೋನ್‌ಗಳು, ದಾಖಲೆಗಳು ಸೇರಿದಂತೆ ಎಫ್ಎಸ್​ಎಲ್​​ಗೆ ಹೋಗಿ ಬಂದ ಎಲ್ಲಾ ವಸ್ತುಗಳನ್ನು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.

ವಿಚಾರಣೆ ಮುಂದೂಡಿಕೆ:

ಪ್ರಕರಣದ ದೂರುದಾರ ಚಿನ್ನಯ್ಯ ಕೂಡ ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಪತ್ನಿಯೊಂದಿಗೆ ಆಗಮಿಸಿದ್ದನು. ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ಚಿನ್ನಯ್ಯನ ವಿಚಾರಣೆ ಇತ್ತು‌‌. ನ್ಯಾಯಾಲಯವು ಆಗಸ್ಟ್ 29ಕ್ಕೆ ಚಿನ್ನಯ್ಯನ ವಿಚಾರಣೆಯನ್ನು ಮುಂದೂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments