ಭಾರತ ಮಹಿಳಾ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕತ್ವಕ್ಕೆ ಹರ್ಮನ್ ಪ್ರೀತ್ ಕೌರ್ ರಾಜೀನಾಮೆ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಆರ್ ಸಿಬಿ ನಾಯಕಿ ಸ್ಮೃತಿ ಮಂದಾನ ನೇಮಕಗೊಂಡಿದ್ದಾರೆ.
ಬಿಸಿಸಿಐ ಹರ್ಮನ್ ಪ್ರೀತ್ ಕೌರ್ ನಾಯಕಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತ ಮಹಿಳಾ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕಿಯನ್ನಾಗಿ ಸ್ಮೃತಿ ಮಂದಾನ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಆರ್ ಸಿಬಿ ತಂಡದ ನಾಯಕಿಯಾಗಿ 2024 ಮತ್ತು 2026ರಲ್ಲಿ ಎರಡು ಬಾರಿ ಡಬ್ಲೂಪಿಎಲ್ ಪ್ರಶಸ್ತಿ ತಂದುಕೊಟ್ಟಿದ್ದ ಸ್ಮೃತಿ ಮಂದಾನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹಲವು ಬ್ಯಾಟಿಂಗ್ ದಾಖಲೆ ಮಾಡಿ ಸಾಕಷ್ಟು ಅನುಭವ ಹೊಂದಿದ್ದಾರೆ. ಇದೀಗ ಅವರಿಗೆ ಹೊಸ ಜವಾಬ್ದಾರಿ ವಹಿಸಲಾಗಿದೆ.
2013ರಲ್ಲಿ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ್ದ ಸ್ಮೃತಿ ಮಂದಾನ ಈಗಾಗಲೇ 18 ಟಿ-20 ಹಾಗೂ 4 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಆದರೆ ಈಗ ಪೂರ್ಣ ಪ್ರಮಾಣದ ನಾಯಕಿಯಾಗಿ ತಂಡವನ್ನು ಮುನ್ನಡೆಸಲಿದ್ದಾರೆ.



