Thursday, May 14, 2026
Google search engine
Homeಅಪರಾಧಮೊಮ್ಮಕ್ಕಳ ಹೆಸರಿಗೆ ಆಸ್ತಿ ಬರೆದಿದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!

ಮೊಮ್ಮಕ್ಕಳ ಹೆಸರಿಗೆ ಆಸ್ತಿ ಬರೆದಿದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!

ಆಸ್ತಿಗಾಗಿ ವೃದ್ಧ ತಂದೆಯನ್ನು ಮಗನೇ ಹೊಡೆದು ಚಾಕುವಿನಿಂದ ಇರಿದು ಕೊಂದ ಘಟನೆ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಮುನಿಕೃಷ್ಣ (70) ಅವರನ್ನು ಪುತ್ರ ಮೋಹನ್ ಕುಮಾರ್ ಕೊಲೆಗೈದು ಪರಾರಿಯಾಗಿದ್ದಾನೆ.
ಆಸ್ತಿ ವಿಚಾರಕ್ಕಾಗಿ ಈ ಹಿಂದೆ ಹಲವು ಬಾರಿ ತಂದೆ ಮಕ್ಕಳ ನಡುವೆ ಗಲಾಟೆಯಾಗಿತ್ತು. ಇದೇ ವಿಚಾರವಾಗಿ ಎರಡು ದಿನಗಳ ಹಿಂದೆ ಆರೋಪಿ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ.

ತೀವ್ರ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತ ಮುನಿಕೃಷ್ಣ ಬಿಎಂಟಿಸಿ ನಿವೃತ್ತ ಕಂಡಕ್ಟರ್ ಆಗಿದ್ದು, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಮಾಡಿದ್ದರು. ಮೊಮ್ಮಕ್ಕಳ ಹೆಸರಿಗೆ ಕೆಲವು ಆಸ್ತಿಯ ವಿಲ್ ಮಾಡಿಟ್ಟಿದ್ದರು. ಇದೇ ಕೋಪಕ್ಕೆ ಮುನಿಕೃಷ್ಣ ಮತ್ತು ಮಕ್ಕಳ ನಡುವೆ ಗಲಾಟೆಯಾಗಿತ್ತು ಎಂದು ತಿಳಿದು ಬಂದಿದೆ.

ಕೊಲೆ ಪ್ರಕರಣ ದಾಖಲಿಸಿಕೊಂಡ ಇಂದಿರಾನಗರ ಪೊಲೀಸರು ಆರೋಪಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments