ಚಿತ್ರದುರ್ಗ: ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆಯಾಗಿದ್ದಾನೆ.
ಪಾಪಿ ಪುತ್ರ ಲಿಂಗರಾಜ್ ಎಂಬಾತ ತಂದೆಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಮನೆಯಲ್ಲಿ ಮದುವೆ ವಿಚಾರಕ್ಕೆ ಜಗಳ ಮಾಡಿದ್ದು, ತಂದೆಯ ತಲೆಗೆ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ.
ತಂದೆಯನ್ನು ಹತ್ಯೆ ಮಾಡಿದ ಆರೋಪಿ ಲಿಂಗರಾಜನನ್ನ ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಹೊಸದುರ್ಗ ಪಿ.ಐ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.



