ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ಬ್ರಿಸ್ಬೇನ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಭಾನುವಾರ ವಿಕೆಟ್ ನಷ್ಟವಿಲ್ಲದೇ 28 ರನ್ ಗಳಿಂದ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ ಮತ್ತು ಸ್ಟೀವನ್ ಸ್ಮಿತ್ ಶತಕಗಳ ನೆರವಿನಿಂದ ಬೃಹತ್ ಮೊತ್ತದತ್ತ ಸಾಗಿದೆ. ದಿನದಾಟದ ಅಂತ್ಯಕ್ಕೂ ಮುನ್ನ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ಕಳೆದುಕೊಂಡು 323 ರನ್ ಗಳಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ತಂಡ ಮೊದಲ ದಿನದಾಟ ಮಳೆಗೆ ಬಲಿಯಾಗಿತ್ತು. ಭಾನುವಾರ ಆಟ ಮುಂದುವರಿಸಿದ ಆಸ್ಟ್ರೇಲಿಯಾ ಆರಂಭಿಕ ಆಘಾತ ಅನುಭವಿಸಿದರೂ ನಂತರ ಚೇತರಿಕೆ ಕಂಡು ಬೃಹತ್ ಮೊತ್ತದತ್ತ ಸಾಗಿದೆ.
ಎರಡನೇ ಟೆಸ್ಟ್ ಪಂದ್ಯ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಟ್ರಾವಿಸ್ ಈ ಪಂದ್ಯದಲ್ಲೂ ಶತಕ ಸಿಡಿಸಿ ಗಮನ ಸೆಳೆದರು. ಟ್ರಾವಿಡ್ ಹೆಡ್ 160 ಎಸೆತಗಳಲ್ಲಿ 18 ಬೌಂಡರಿ ಒಳಗೊಂಡ 152 ರನ್ ಬಾರಿಸಿ ಔಟಾದರು.
ಸ್ಟೀವನ್ ಸ್ಮಿತ್ 500 ದಿನಗಳ ನಂತರ ಶತಕ ದಾಖಲಿಸಿ ಶಕತದ ಬರ ನೀಗಿಸಿಕೊಂಡಿದ್ದಾರೆ. ಸ್ಟಿವನ್ ಸ್ಮಿತ್ ಇದು 33ನೇ ಟೆಸ್ಟ್ ಶತಕವಾಗಿದೆ. ಅಲ್ಲದೇ ಭಾರತ ವಿರುದ್ಧವೇ ದಾಖಲಿಸಿದ 10ನೇ ಶತಕವಾಗಿದೆ. ಆದರೆ 190 ಎಸೆತಗಳಲ್ಲಿ 12 ಬೌಂಡರಿ ಸಹಾಯದಿಂದ 101 ರನ್ ಬಾರಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು.