ಆರಂಭಿಕ ಶುಭಮನ್ ಗಿಲ್ ಅವರ ಎಡಗೈ ಹೆಬ್ಬೆರಳಿಗೆ ಅಭ್ಯಾಸ ಪಂದ್ಯದ ವೇಳೆ ಗಾಯವಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.
ಪರ್ತ್ ನಲ್ಲಿ ನವೆಂಬರ್ ೨೨ರಂದು ಗಾವಸ್ಕರ-ಬಾರ್ಡರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದ್ದು, ಈಗಾಗಲೇ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡುತ್ತಿರುವ ನಡುವೆ ಗಿಲ್ ಗಾಯಗೊಂಡಿರುವುದು ತಂಡವನ್ನು ಚಿಂತೆಗೀಡು ಮಾಡಿದೆ.
ನಾಯಕ ರೋಹಿತ್ ಶರ್ಮ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಭಾರತ ತಂಡದ ಬ್ಯಾಟಿಂಗ್ ಬಲ ಕುಂದಿರುವ ನಡುವೆ ಗಿಲ್ ಅನುಪಸ್ಥಿತಿ ತಂಡವನ್ನು ಕಾಡುವ ಸಾಧ್ಯತೆ ಇದೆ.
ಭಾರತ ಮತ್ತು ಭಾರತ ಎ ನಡುವಣ ಅಭ್ಯಾಸ ಪಂದ್ಯದ ವೇಳೆ ಜಸ್ ಪ್ರೀತ್ ಬುಮ್ರಾ ಸಾರಥ್ಯದಲ್ಲಿ ಬೌಲರ್ ಗಳು ಬೌನ್ಸರ್ ಗಳ ಮೂಲಕ ಬ್ಯಾಟ್ಸ್ ಮನ್ ಗಳನ್ನು ಕಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯದ ವೇಳೆ ಕೇವಲ ೧೫ ರನ್ ಗಳಿಸಿ ಔಟಾಗಿದ್ದಾರೆ. ಆದ್ದರಿಂದ ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಿದ್ದಾರೆ.