Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಬಾಂಗ್ಲಾದ ಖ್ಯಾತ ಕ್ರಿಕೆಟಿಗ ತಮೀಮ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
tamim iqbal
tamim iqbal

ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಐಕ ಹಾಗೂ ದಿಟ್ಟ ಬ್ಯಾಟರ್ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತ ಆಗಿರುವುದಾಗಿ ವರದಿಯಾಗಿದೆ.

ಸೋಮವಾರ ದೇಶೀಯ ಕ್ರಿಕೆಟ್ ಪಂದ್ಯದ ವೇಳೆ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಢಾಕಾದ ಹೊರವಲಯದ ಸವಾರ್ ಎಂಬಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಳಿಸಿವೆ.

ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್‌ನ 50 ಓವರ್‌ಗಳ ಪಂದ್ಯದಲ್ಲಿ ತಮೀಮ್ ಇಕ್ಬಾಲ್ ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ತಂಡವನ್ನು ಮುನ್ನಡೆಸುತ್ತಿದರು.

ಪಂದ್ಯಕ್ಕೂ ಮುನ್ನ ಟಾಸ್‌ನಲ್ಲಿ ತಮೀಮ್ ಇಕ್ಬಾಲ್ ಭಾಗವಹಿಸಿದ್ದರು. ಆದರೆ ನಂತರ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಈ ವೇಳೆ ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಮೈದಾನದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ತಮೀಮ್ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಾಗ ಆರಂಭದಲ್ಲಿ ಅವರನ್ನು ಹೆಲಿಕಾಪ್ಟರ್ ಮೂಲಕ ಢಾಕಾಗೆ ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗಿತ್ತು.

ಆದರೆ ಕಾರಣಾಂತರಗಳಿಂದ ಅವರನ್ನು ಬಿಕೆಎಸ್‌ಪಿ ಮೈದಾನದಿಂದ ಏರ್‌ಲಿಫ್ಟ್ ಮಾಡಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಫಜಿಲತುನ್ನೆಸ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಗಳು ಹೇಳಿವೆ.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮುಖ್ಯ ವೈದ್ಯ ದೇಬಾಶಿಶ್ ಚೌಧರಿ ಮಾತನಾಡಿ, “ತಮೀಮ್ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಲ್ಲಿ ಅವರಿಗೆ ಇಸಿಜಿ ಮಾಡಲಾಗಿದ್ದು, ಸ್ವಲ್ಪ ಸಮಸ್ಯೆ ಇರುವುದು ಕಂಡು ಬಂದಿದೆ. ಕೆಲವೊಮ್ಮೆ ಹೃದಯದ ಸ್ಥಿತಿ ಏನೆಂದು ನಿಮಗೆ ತಕ್ಷಣ ಅರ್ಥವಾಗುವುದಿಲ್ಲ. ಮೊದಲ ರಕ್ತ ಪರೀಕ್ಷಾ ವರದಿಯಲ್ಲಿ ಒಂದು ಸಮಸ್ಯೆ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ತಮೀಮ್ ಇಕ್ಬಾಲ್ ಅವರ ಆರೋಗ್ಯ ವಿಚಾರಿಸಲು ಭೇಟಿ ಮಾಡಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಸದಸ್ಯರು ಆಸ್ಪತ್ರೆ ಆಗಮಿಸಿದರು. ಹೀಗಾಗಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ತನ್ನ ನಿಗದಿತ ಮಂಡಳಿಯ ಸಭೆಯನ್ನು ರದ್ದುಗೊಳಿಸಿತು.

ತಮೀಮ್ ಇಕ್ಬಾಲ್ 2007ರಿಂದ 2023 ರವರೆಗೆ ಬಾಂಗ್ಲಾದೇಶ ಪರ ಎಲ್ಲಾ ಸ್ವರೂಪಗಳಲ್ಲಿ 391 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿ 15,000ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment