ಭಾರತದ ಜಿ.ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಗುರುವಾರ ನಡೆದ 14ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರಿನ್ ಅವರನ್ನು ಮಣಿಸಿದರು. ಈ ಮೂಲಕ ೧೮ನೇ ವಯಸ್ಸಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು.
ಭಾರತದ ವಿಶ್ವನಾಥನ್ ಆನಂದ್ ೨೦೧೨ರಲ್ಲಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ನಂತರ ಈ ಪ್ರಶಸ್ತಿ ಎತ್ತಿಹಿಡಿದ ಭಾರತದ ಚೆಸ್ ಪಟು ಎಂಬ ಹೆಗ್ಗಳಿಕೆಗೆ ಗುಕೇಶ್ ಪಾತ್ರರಾಗಿದ್ದಾರೆ.
ಗುಕೇಶ್ ಮತ್ತು ಡಿಂಗ್ ಲಿರಿನ್ 11 ಡ್ರಾ ಹಾಗೂ 2 ಗೆಲುವಿನೊಂದಿಗೆ ಫೈನಲ್ ತಲುಪಿದ್ದರು. ಈ ಪಂದ್ಯ ಒಂದು ವೇಳೆ ಡ್ರಾದಲ್ಲಿ ಅಂತ್ಯಗೊಂಡರೆ ಶುಕ್ರವಾರ ಟೈಬ್ರೇಕರ್ ಪಂದ್ಯ ನಡೆಯಬೇಕಿತ್ತು. ಆದರೆ ಇದಕ್ಕೆ ಅವಕಾಶ ನೀಡದ ಗುಕೇಶ್ ಪ್ರಶಸ್ತಿ ಎತ್ತಿ ಹಿಡಿದು ಹೊಸ ದಾಖಲೆ ಬರೆದರು.