ನಾಳೆಯಿಂದ ಆರಂಭಗೊಳ್ಳಲಿರುವ ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ 11 ಆಟಗಾರರ ತಂಡವನ್ನು ಪ್ರಕಟಿಸಲಿದ್ದು, ಪ್ರಮುಖ ಬದಲಾವಣೆ ಮಾಡಲಾಗಿದೆ.
ಡಿಸೆಂಬರ್ ೬ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್=ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯ ಆರಂಭಗೊಳ್ಳಲಿದೆ. ಪಿಂಕ್ ಚೆಂಡಿನಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳ ಪಾಲಿಗೆ ಮಹತ್ವದ್ದಾಗಿದೆ.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ 2ನೇ ಟೆಸ್ಟ್ ಗೆ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಿರುವುದನ್ನು ಪ್ರಕಟಿಸಿದರು. ಗಾಯಗೊಂಡ ಜೋಸ್ ಹಾಜೆಲ್ ವುಡ್ ಸ್ಥಾನಕ್ಕೆ ಸ್ಕಾಟ್ ಬೋಲಂಡ್ ಸ್ಥಾನ ಪಡೆದಿದ್ದಾರೆ.
ಗಾಯದ ಕಾರಣ ಕಳೆದ 18 ತಿಂಗಳಿಂದ ತಂಡದಿಂದ ಹೊರಗುಳಿದಿದ್ದ ಮಧ್ಯಮ ವೇಗಿ ಹಾಗೂ ಕೆಳ ಕ್ರಮಾಂಕದಲ್ಲಿ ಉತ್ತಮ ಬ್ಯಾಟ್ಸ್ ಮನ್ ಆಗಿರುವ ಸ್ಕಾಟ್ ಬೋಲಾಂಡ್ ಮೊದಲ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದೇ ವೇಳೆ ಮಿಚೆಲ್ ಮಾರ್ಷ್ ಕೂಡ ಗಾಯಗೊಂಡಿದ್ದರೂ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ನಾಯಕ ಕಮಿನ್ಸ್ ಸ್ಪಷ್ಟಪಡಿಸಿದ್ದಾರೆ.
ಭಾರತ ತಂಡ ಪರ್ತ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 295 ರನ್ ಗಳ ಭಾರೀ ಅಂತರದಿಂದ ಸೋತು ೫ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 0-1ರಿಂದ ಹಿನ್ನಡೆ ಅನುಭವಿಸಿದೆ. ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಬ್ಯಾಟಿಂಗ್ ವೈಫಲ್ಯ ತಂಡವನ್ನು ಕಾಡಿತ್ತು. ಇದರ ನಡುವೆಯೂ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಮಹತ್ವದ ಬದಲಾವಣೆ ಮಾಡಲಾಗಿಲ್ಲ.
ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮಿನ್ಸ್ (ನಾಯಕ), ಉಸ್ಮಾನ್ ಖ್ವಾಜಾ, ನಾಥನ್ ಮೆಕ್ ಸ್ವೀನಿ, ಮಾರ್ನೂಸ್ ಲ್ಯಾಬ್ ಸ್ಕೇಂಜ್, ಸ್ವೀವನ್ ಸ್ಮಿತ್, ಟ್ರಾವಿಡ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಾಥನ್ ಲಿಯೊನ್, ಸ್ಟಾಟ್ ಬೊಲಾಂಡ್.