ಬಾಲಿವುಡ್ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸುಭಾಷ್ ಘಾಯ್ ಅವರನ್ನು ಶನಿವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಶನಿವಾರ ರಾತ್ರಿ ಮುಂಬೈನ ಭಾಂದ್ರಾದಲ್ಲಿರುವ ಖ್ಯಾತ ಲೀಲಾವತಿ ಆಸ್ಪತ್ರಗೆ ಸುಭಾಷ್ ಘಾಯ್ ಅವರನ್ನು ದಾಖಲಿಸಲಾಗಿದೆ.
ಸುಭಾಷ್ ಘಾಯ್ ಅವರನ್ನು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆರೋಗ್ಯವಾಗಿದ್ದಾರೆ. ಆತಂಕಪಡುವ ಅವಶ್ಯಕತೆ ಇಲ್ಲ. ನಿಮ್ಮ ಪ್ರೀತಿ, ಕಾಳಜಿಗೆ ಅಭಿನಂದನೆಗಳು ಎಂದು ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ.
ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ಸುಭಾಷ್ ಘಾಯ್ ಇತ್ತೀಚೆಗೆ ಚಿಕಿತ್ಸೆ ಪಡೆದಿದ್ದು, ವೈದ್ಯರ ಸಲಹೆ ಮೇರೆಗೆ ಆರೋಗ್ಯ ತಪಾಸಣೆಗಾಗಿ ಐಸಿಯುನಲ್ಲಿ ದಾಖಲಾಗಿದ್ದಾರೆ.