Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಚಾಂಪಿಯನ್ಸ್ ಟ್ರೋಫಿ: ಇಂಗ್ಲೆಂಡ್ ಮಣಿಸಿ ಇತಿಹಾಸ ಬರೆದ ಅಫ್ಘಾನಿಸ್ತಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
afghanistan
afghanistan

ಆರಂಭಿಕ ಇಬ್ರಾಹಿಂ ಜರ್ದಾರ್ ದಾಖಲೆಯ ಶತಕ ಹಾಗೂ ಅಜಮತ್ತುಲ್ಲಾ ಓಮರಾಜಿ ಅವರ ಮಾರಕ ದಾಳಿ ನೆರವಿನಿಂದ ಆಫ್ಘಾನಿಸ್ತಾನ ತಂಡ 8 ರನ್ ಗಳಿಂದ ಪ್ರಬಲ ಇಂಗ್ಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸ ಬರೆದಿದೆ.

ಲಾಹೋರ್ ನಲ್ಲಿ ಬುಧವಾರ ನಡೆದ ಬಿ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡ 7 ವಿಕೆಟ್ ಕಳೆದುಕೊಂಡು 325 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಇಂಗ್ಲೆಂಡ್ ತಂಡ 49.5 ಓವರ್ ಗಳಲ್ಲಿ 217 ರನ್ ಗೆ ಆಲೌಟಾಯಿತು.

ಈ ಗೆಲುವಿನೊಂದಿಗೆ ಆಫ್ಘಾನಿಸ್ತಾನ ಬಿ ಗುಂಪಿನಲ್ಲಿ 3ನೇ ಸ್ಥಾನಕ್ಕೆ ಜಿಗಿದಿದ್ದೂ ಅಲ್ಲದೇ ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಂಡರೆ, ಕೊನೆಯ ಸ್ಥಾನಕ್ಕೆ ಕುಸಿದ ಇಂಗ್ಲೆಂಡ್ ಟೂರ್ನಿಯಿಂದ ಬಹುತೇಕ ಹೊರಬಿದ್ದಂತೆ ಆಗಿದ್ದು, ಅದೃಷ್ಟದ ಮೇಲೆ ನಂಬಿಕೆ ಇಡುವಂತೆ ಆಗಿದೆ.

ಬೃಹತ್ ಮೊತ್ತ ಬೆಂಬತ್ತಿದ ಇಂಗ್ಲೆಂಡ್ ತಂಡಕ್ಕೆ ಜೋ ರೂಟ್ ಶತಕದ ಆಸರೆ ನೀಡಿದರೂ ಮತ್ತೊಂದು ಕಡೆ ವಿಕೆಟ್ ಗಳು ಪತನಗೊಳ್ಳುತ್ತಿದ್ದಂತೆ ಗೆಲುವಿನ ಹೊಸ್ತಿಲಲ್ಲಿ ಎಡವಿತು. ರೂಟ್ 111 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 120 ರನ್ ಗಳಿಸಿದರು.

ಬೆನ್ ಡುಕೆಟ್ (38), ನಾಯಕ ಜೋಸ್ ಬಟ್ಲರ್ (38), ಜೇಮಿ ಓವರ್ಟನ್ (32) ಮತ್ತು ಹ್ಯಾರಿ ಬ್ರೂಕ್ (25) ತಕ್ಕಮಟ್ಟಿಗೆ ಹೋರಾಟ ನಡೆಸಿದರೂ ಫಲ ನೀಡಲಿಲ್ಲ. ಆಫ್ಘಾನಿಸ್ತಾನ ಪರ ಅಜಮತುಲ್ಲಾ ಓಮರಾಜಿ 58 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರೆ, ಮೊಹಮದ್ ನಬಿ 2 ವಿಕೆಟ್ ಗಳಿಸಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡ 37 ರನ್ ಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೆ ಆರಂಭಿಕ ಇಬ್ರಾಹಿಂ ಸರ್ದಾನ್ 146 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್ ಸೇರಿದಂತೆ 177 ರನ್ ಸಿಡಿಸಿ ಜೀವನಶ್ರೇಷ್ಠ ಸಾಧನೆ ಮಾಡಿದರು.

ಇಬ್ರಾಹಿಂ ಸರ್ದಾನ್ ಗೆ ಉತ್ತಮ ಬೆಂಬಲ ನೀಡಿದ ನಾಯಕ ಹಜಮತುಲ್ಲಾಹ್ ಶಾಹಿದಿ (40), ಅಜಮತುಲ್ಲಾ ಓಮರಾಜಿ (41) ಮತ್ತು ಮೊಹಮದ್ ನಬಿ (40) ನಿರೀಕ್ಷೆಗೂ ಮೀರಿ ಹೋರಾಟ ನಡೆಸಿ ತಂಡವನ್ನು ಬೃಹತ್ ಮೊತ್ತದ ಕನಸು ನನಸು ಮಾಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment