ಎಲ್ಲಾ ಮಾದರಿಯ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಡಾರೆನ್ ಸ್ಯಾಮಿ ನೇಮಕಗೊಂಡಿದ್ದಾರೆ.
ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಹಾಗೂ ಆಲ್ ರೌಂಡರ್ ಡಾರೆನ್ ಸ್ಯಾಮಿ ಪುರುಷರ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದು, 2025 ಏಪ್ರಿಲ್ 1ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
ಪ್ರಸ್ತುತ ವೆಸ್ಟ್ ಇಂಡೀಸ್ ತಂಡದ ಟೆಸ್ಟ್ ಕ್ರಿಕೆಟ್ ತಂಡದ ಕೋಚ್ ಆಗಿರುವ ಆಂಡ್ರೆ ಕೊಲೈ ಸ್ಥಾನವನ್ನು ಸ್ಯಾಮಿ ತುಂಬಲಿದ್ದಾರೆ. ಸ್ಯಾಮಿ ನಾಯಕರಾಗಿ ಎರಡು ಬಾರಿ ವೆಸ್ಟ್ ಇಂಡೀಸ್ ಗೆ ಟಿ-20 ವಿಶ್ವಕಪ್ (2012 ಮತ್ತು 2016) ಪ್ರಶಸ್ತಿ ತಂದುಕೊಟ್ಟಿದ್ದರು.
2023ರಲ್ಲಿ ಸೀಮಿತ ಓವರ್ ಗಳ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಸ್ಯಾಮಿ ಇದೀಗ ಅಧಿಕೃತವಾಗಿ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ತಂಡವನ್ನು ರೂಪಿಸುವ ಮಹತ್ವದ ಜವಾಬ್ದಾರಿ ಹೊತ್ತಿದ್ದಾರೆ.