ಸರಣಿ ಸೋಲು ತಪ್ಪಿಸಿಕೊಳ್ಳಬೇಕಾದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಅಹಮದಾಬಾದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ.
ಭಾರತ ತಂಡದಲ್ಲಿ ಹರ್ಷಿತ್ ರಾಣಾ, ಕುಲದೀಪ್ ಯಾದವ್ ಮತ್ತು ಶುಭಮನ್ ಗಿಲ್ ಬದಲಿಗೆ ಜಸ್ ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್ ಮತ್ತು ಸಂಜು ಸ್ಯಾಮನ್ಸ್ ತಂಡಕ್ಕೆ ಮರಳಿದ್ದಾರೆ.
ಭಾರತ ತಂಡ ಈಗಾಗಲೇ ೫ ಪಂದ್ಯಗಳ ಟಿ-೨೦ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದ್ದು, ಸರಣಿ ಗೆಲ್ಲಬೇಕಾದರೆ ಈ ಪಂದ್ಯ ಗೆಲ್ಲಬೇಕಾಗಿದೆ. ಒಂದು ವೇಳೆ ದಕ್ಷಿಣ ಆಫ್ರಿಕಾ ಗೆದ್ದರೆ ಸರಣಿ ಸಮಬಲದಲ್ಲಿ ಅಂತ್ಯಗೊಳ್ಳಲಿದೆ. ನಾಲ್ಕನೇ ಏಕದಿನ ಪಂದ್ಯ ದಟ್ಟ ಮಂಜಿನ ಕಾರಣ ರದ್ದುಗೊಂಡಿತ್ತು.


