Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಕೋ-ಆಪರೇಟಿವ್ ಸೊಸೈಟಿ ಇಡಿ ದಾಳಿ: 1.3 ಕೋಟಿ ಮೌಲ್ಯದ ಸೊತ್ತು ವಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
co oparative socity

ಬೆಂಗಳೂರು: ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ 15 ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ 100 ಕೋಟಿ ರೂ. ವಂಚನೆ ಮಾಡಿದ ಆರೋಪದ ಸಂಬಂಧ ನಗರದ ಕೋ-ಆಪರೇಟಿವ್ ಸೊಸೈಟಿ ಮೇಲೆ ಜಾರಿ ನಿರ್ದೇಶಾನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿಜಯನಗರ, ಜಾಲಹಳ್ಳಿ, ಆರ್​ಪಿಸಿ ಲೇಔಟ್ ಶಾಖೆಗಳು ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ.

ಈ ಕೋ-ಆಪರೇಟಿವ್ ಸೊಸೈಟಿ, ವಿಲ್ಸನ್ ಗಾರ್ಡನ್​ನಲ್ಲಿ ಪ್ರಧಾನ ಕಚೇರಿ ಹೊಂದಿದ್ದು ವಂಚನೆಗೆ ಸಂಬಂಧಿಸಿದಂತೆ ಜಾಲಹಳ್ಳಿ, ವಿಲ್ಸನ್ ಗಾರ್ಡನ್, ಯಲಹಂಕ, ಪೀಣ್ಯ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೊಸೈಟಿ ಅಧ್ಯಕ್ಷರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು‌. ಬಳಿಕ ಸಿಸಿಬಿಗೆ ವರ್ಗಾವಣೆಗೆ ಆಗುತ್ತಿದ್ದಂತೆ ಪ್ರಕರಂಕ್ಕೆ ಸಂಬಂಧಿಸಿ ಐವರನ್ನು 2022ರಲ್ಲಿ ಬಂಧಿಸಲಾಗಿತ್ತು.

1998ರಲ್ಲಿ ಕೋ ಆಪರೇಟಿವ್ ಬ್ಯಾಂಕ್ ಬೆಂಗಳೂರಿನ ಪೀಣ್ಯಾದಲ್ಲಿ ಶುರುವಾಗಿ ನಂತರ ನಗರದ ಹಲವು ಕಡೆ ಬ್ರಾಂಚ್ ಓಪನ್ ಮಾಡಿತ್ತು. ಹೂಡಿಕೆ ಮಾಡುವ ಹಣಕ್ಕೆ ಇತರ ಬ್ಯಾಂಕ್​ಗಳಿಗಿಂತ ಹೆಚ್ಚಿನ ರಿಟರ್ನ್ಸ್ ಕೊಡುವುದಾಗಿ ಗ್ರಾಹಕರಿಂದ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು.

ಗ್ರಾಹಕರ ಕೋಟ್ಯಂತರ ರೂಪಾಯಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದ್ದ ಆರೋಪವಿತ್ತು. ಖಾತೆದಾರರು ಹೂಡಿಕೆ ಮಾಡಿದ್ದ ಅಸಲಿ ಹಣ ಹಾಗೂ ಬಡ್ಡಿಯನ್ನು ಕೊಡದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಹಲವೆಡೆ ದಾಖಲಾಗಿದ್ದ ಕೇಸ್​ಗಳು ಸಿಸಿಬಿಗೆ ವರ್ಗಾವಣೆಯಾಗಿತ್ತು. ತನಿಖೆ ನಡೆಸಿ ಐವರನ್ನು ಬಂಧಿಸಿದ್ದ ಸಿಸಿಬಿ, ಪ್ರಕರಣ ಸಂಬಂಧ ಐಟಿ ಹಾಗೂ ಇಡಿಗೆ ಮಾಹಿತಿ ನೀಡಿತ್ತು. 2023ರಲ್ಲಿ ಆರ್​ಬಿಐ ಕೋ-ಆಪರೇಟಿವ್ ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment